ಕೆ.ಮರೀಗೌಡ 
ರಾಜ್ಯ

ಮುಡಾ ಪ್ರಕರಣ: ಸಿದ್ಧರಾಮಯ್ಯ ಆಪ್ತ ಮರೀಗೌಡ, ಇತರ ಆರು ಮಂದಿಗೆ ED ನೋಟಿಸ್

ಮುಡಾದ ಮಾಜಿ ಆಯುಕ್ತ ನಟೇಶ್ ಮತ್ತು ದಿನೇಶ್ ಕುಮಾರ್ ಅವರಿಗೂ ED ನೋಟಿಸ್ ನೀಡಿದೆ. ಒಂದೊಮ್ಮೆ ಇವರನ್ನು ತನಿಖೆಗೊಳಪಡಿಸಿದರೆ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿದ್ದರಾಮಯ್ಯ ಅವರಿಗೆ ಇಡಿ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.

ಬೆಂಗಳೂರು: ಅನಾರೋಗ್ಯದ ಕಾರಣ ನೀಡಿ ಇತ್ತೀಚಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕೆ. ಮರೀಗೌಡ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ. ವಿಚಾರಣೆಗೆ ಕೂಡಲೇ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರಿಗೂ ಇಡಿ ಸಮನ್ಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾದ ಮಾಜಿ ಆಯುಕ್ತ ನಟೇಶ್ ಮತ್ತು ದಿನೇಶ್ ಕುಮಾರ್ ಅವರಿಗೂ ED ನೋಟಿಸ್ ನೀಡಿದೆ. ಒಂದೊಮ್ಮೆ ಇವರನ್ನು ತನಿಖೆಗೊಳಪಡಿಸಿದರೆ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿದ್ದರಾಮಯ್ಯ ಅವರಿಗೆ ಇಡಿ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.

ನಟೇಶ್ ಮತ್ತು ದಿನೇಶ್ ಕುಮಾರ್ ಅವರ ನಿವಾಸಗಳ ಮೇಲೆ ಇತ್ತೀಚಿಗೆ ಇಡಿ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ನಟೇಶ್ ಅವರ ನಿವಾಸದಿಂದ ನಾಲ್ಕು ಬ್ಯಾಗ್ ಗಳಲ್ಲಿದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ನಂತರ ಅವರ ಸ್ವಂತ ಕಾರಿನಲ್ಲಿ ಇಡಿ ಕಚೇರಿಗೆ ಕರೆದೊಯ್ಯಲಾಗಿತ್ತು. ನಟೇಶ್ ಮತ್ತು ದಿನೇಶ್ ಕುಮಾರ್ ಅವರು ಸುಳ್ಳು ದಾಖಲೆ ಸೃಷ್ಟಿಸಿ ನೂರಾರು ಕೋಟಿ ಮೌಲ್ಯದ ಮುಡಾ ನಿವೇಶನಗಳನ್ನು ಕೆಲವರಿಗೆ ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪವಿದೆ.

ಅಕ್ಟೋಬರ್ 29 ರಂದು ಇಡಿ ಮೈಸೂರು ಮೂಲದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಂದ ಮಹತ್ವದ ದಾಖಲೆಗಳನ್ನು ಪಡೆದುಕೊಂಡಿತ್ತು. ಬುಧವಾರ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರ ಮುಂದೆ ಹಾಜರಾಗಿ ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.

ಸಿಬಿಐ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26 ರಂದು ಕೈಗೆತ್ತಿಕೊಳ್ಳಲಿದ್ದು, ತನಿಖಾ ವರದಿ ಸಲ್ಲಿಸುವಂತೆ ಲೋಕಾಯುಕ್ತ ಸಂಸ್ಥೆಗೆ ನ್ಯಾಯಾಲಯ ಸೂಚಿಸಿದೆ. ಅಧಿಕಾರದಲ್ಲಿದ್ದಾಗ ಲೋಕಾಯುಕ್ತ ತನಿಖೆ ಎದುರಿಸಿದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ.

ತಮ್ಮ ಪತ್ನಿಗೆ ಮುಡಾದಿಂದ ಅಕ್ರಮವಾಗಿ 14 ನಿವೇಶನ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿದ್ದಾರೆ. ಈ ಸಂಬಂಧ ಸದ್ಯ ಲೋಕಾಯುಕ್ತ ಹಾಗೂ ಇಡಿ ತನಿಖೆ ನಡೆಸುತ್ತಿದೆ. ಸಿಎಂ ಪತ್ನಿ ಮುಡಾಕ್ಕೆ ಮಂಜೂರು ಮಾಡಿದ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಸಿದ್ದರಾಮಯ್ಯನವರ ಆಪ್ತರಾಗಿದ್ದ ಮರಿಗೌಡ ಅವರು ಆರೋಗ್ಯದ ಕಾರಣ ನೀಡಿ ಇತ್ತೀಚಿಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಇದಕ್ಕೆ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಯಾವುದೇ ಒತ್ತಡ ಇರಲಿಲ್ಲ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

20 ಸಾವಿರಕ್ಕೆ ಬಿಹಾರ ಯುವತಿಯರು ವಿವಾಹಕ್ಕೆ ಲಭ್ಯ: ಉತ್ತರಾಖಂಡ ಸಚಿವೆಯ ಪತಿ ವಿವಾದಾತ್ಮಕ ಹೇಳಿಕೆ

ಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರಿಗೆ ಹೇಗೆ ಬಂದರು? ಮೋದಿ- ಅಮಿತ್ ಶಾ ಏನು ಮಾಡುತ್ತಿದ್ದಾರೆ? ರಾಮಲಿಂಗಾ ರೆಡ್ಡಿ ಪ್ರಶ್ನೆ

SCROLL FOR NEXT