ರಾಜ್ಯ

ವಕ್ಫ್ ಭೂ ವಿವಾದ: ವಿಜಯಪುರಕ್ಕೆ ಭೇಟಿ ನೀಡಿ JPC ಅಧ್ಯಕ್ಷ ಜಗದಾಂಬಿಕಾ ಪಾಲ್ ಹೇಳಿದ್ದಿಷ್ಟು...

ಜಿಲ್ಲೆಯ ರೈತರ ಅಹವಾಲುಗಳನ್ನು ಸ್ವೀಕರಿಸುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ‘ವಕ್ಫ್ ಕಾಯ್ದೆಗೆ-2024’ಕ್ಕೆ ತಿದ್ದುಪಡಿ ತರಲು ಹೊರಟಿದೆ.

ವಿಜಯಪುರ: ಕರ್ನಾಟಕದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಇಂದು ಗುರುವಾರ ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಜಿಲ್ಲೆಯ ರೈತರ ಅಹವಾಲುಗಳನ್ನು ಸ್ವೀಕರಿಸುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ‘ವಕ್ಫ್ ಕಾಯ್ದೆಗೆ-2024’ಕ್ಕೆ ತಿದ್ದುಪಡಿ ತರಲು ಹೊರಟಿದೆ. ಕರ್ನಾಟಕದಲ್ಲಿನ ಸಮಸ್ಯೆಗಳ ಬಗ್ಗೆ ಸಂಸದ ತೇಜಸ್ವಿ ಸೂರ್ಯ ನನ್ನ ಗಮನ ಸೆಳೆದಿದ್ದರು. ದೆಹಲಿ ರೀತಿಯಲ್ಲಿ ರಾಜ್ಯದಲ್ಲಿ ಕೂಡ ರೈತರು ವಕ್ಫ್ ಬೋರ್ಡ್​ನಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು.

ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ರೈತರು ದಶಕಗಳ ಕಾಲ ಉಳುಮೆ ಮಾಡಿದ ಜಮೀನುಗಳನ್ನು ವಕ್ಫ್ ಬೋರ್ಡ್ ಏಕಾಏಕಿ ತನ್ನದೆಂದು ಹೇಳುತ್ತಿದೆ. ರೈತರು ತಮ್ಮ ಆಸ್ತಿ ಪತ್ರದ ವಿವರಗಳನ್ನು ತಂದಿದ್ದಾರೆ. ರೈತರ ಹೆಸರಲ್ಲಿರುವ ಭೂ ದಾಖಲೆ ವಿವರ ನೀಡುತ್ತಿದ್ದಾರೆ. ರೈತರ ಅಹವಾಲು ಸ್ವೀಕರಿಸುತ್ತೇನೆ ಎಂದರು.

ಜಗದಾಂಬಿಕಾ ಪಾಲ್ ಹೇಳಿದ್ದೇನು?

ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿಜಯಪುರ ಜಿಲ್ಲೆಗೂ ಭೇಟಿ ನೀಡುತ್ತಿದ್ದೇನೆ. ಕೇವಲ ರೈತರ ಕೃಷಿ ಭೂಮಿ ಮಾತ್ರವಲ್ಲ, ಪ್ರಾಚ್ಯವಸ್ತು ಇಲಾಖೆಯ ಪಾರಂಪರಿಕ ತಾಣಗಳನ್ನು ಸಹ ವಕ್ಫ್ ತನ್ನದೆಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಸಹ ಮಾಹಿತಿ ಪಡೆಯಲಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸತ್ಯಾಸತ್ಯತೆ ತಿಳಿದು ವರದಿ ನೀಡುತ್ತೇನೆ ಎಂದು ಹೇಳಿದರು.

ಕೃಷಿ ಭೂಮಿಗಳು, ಧಾರ್ಮಿಕ ಸಂಸ್ಥೆಗಳು ಮತ್ತು ದೇವಾಲಯದ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುತ್ತಿರುವ ವಿವಾದಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿದರು. ಜೆಪಿಸಿ ಲೋಕಸಭೆಯ ಸ್ಪೀಕರ್‌ಗೆ ಸಲ್ಲಿಸುವ ವರದಿಯಲ್ಲಿ ತಮ್ಮ ಕಳವಳ ಹೇಳುವುದಾಗಿ ತಮ್ಮನ್ನು ಭೇಟಿ ಮಾಡಿದ ನಿಯೋಗಗಳಿಗೆ ಭರವಸೆ ನೀಡಿದ್ದೇನೆ ಎಂದರು.

ಈ ಭಾಗದ ವಿವಿಧ ಭಾಗಗಳ ರೈತರು, ಧಾರ್ಮಿಕ ಸ್ಥಳಗಳು, ಮಠಾಧೀಶರು ತಮ್ಮ ಗಮನಕ್ಕೆ ಬಾರದೆ ವಕ್ಫ್ ಮಾಲೀಕತ್ವ ಬದಲಾವಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ರಾಜ್ಯಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿದ್ದರು. ಆದರೆ, ರಾಜ್ಯ ಸರ್ಕಾರ ತಮ್ಮ ಭೇಟಿಯನ್ನು ವಿರೋಧಿಸಿತು. ವಕ್ಫ್ ಸಚಿವ ಜಮೀರ್ ಅಹ್ಮದ್ ಪಾಲ್ ಭೇಟಿಯನ್ನು ಕಾನೂನುಬಾಹಿರ ಎಂದು ಆರೋಪಿಸಿದ್ದಾರೆ.

ಈ ಬೆಳವಣಿಗೆಗಳ ಹೊರತಾಗಿಯೂ, ಪಾಲ್ ಅವರು ಇಂದು ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಸೇರಿದಂತೆ ಸುಮಾರು 70 ನಿಯೋಗಗಳಿಂದ ಪ್ರಾತಿನಿಧ್ಯವನ್ನು ಪಡೆದರು. ಅದೇ ಸಮಯದಲ್ಲಿ, ಸಂಸದ ಗೋವಿಂದ್ ಕಾರಜೋಳ ನೇತೃತ್ವದ ಸತ್ಯಶೋಧನಾ ಸಮಿತಿಯನ್ನು ರಾಜ್ಯ ಬಿಜೆಪಿ ರಚಿಸಿದ್ದು, ಸಮಸ್ಯೆಯ ತೀವ್ರತೆಯನ್ನು ಅರ್ಥಮಾಡಿಕೊಳ್ಳಲು ತನ್ನ ವರದಿಯನ್ನು ಸಹ ಜೆಪಿಸಿ ಅಧ್ಯಕ್ಷರಿಗೆ ಸಲ್ಲಿಸಿತು. ಸಮಿತಿಯ ವರದಿಯಲ್ಲಿ ತಮ್ಮ ಸಮಸ್ಯೆಗೆ ಪರಿಹಾರ ಕ್ರಮಗಳನ್ನು ಕಂಡುಕೊಳ್ಳುವಂತೆ ನಿಯೋಗಗಳು ಅಧ್ಯಕ್ಷರನ್ನು ಒತ್ತಾಯಿಸಿದವು.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಜಗದಾಂಬಿಕಾ ಪಾಲ್, “ಕೃಷಿ ಭೂಮಿಗಳು, ಮಠಗಳು ಮತ್ತು ದೇವಸ್ಥಾನದ ಜಮೀನುಗಳನ್ನು ಹೇಗೆ ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲಾಗುತ್ತಿದೆ ಮತ್ತು ಈ ಪ್ರಕರಣಗಳಲ್ಲಿ ಒಂದು ತಿಂಗಳೊಳಗೆ ಭೂ ದಾಖಲೆಗಳು ಮತ್ತು ಮ್ಯುಟೇಶನ್‌ನಲ್ಲಿ ಹೇಗೆ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯ ಆಡಳಿತ ಮತ್ತು ಅಧಿಕಾರಿಗಳ ಸಹಕಾರವಿಲ್ಲದೆ ಇದು ಸಾಧ್ಯವಾಗದು. ರಾಜ್ಯದ ಈ ಪ್ರದೇಶದಲ್ಲಿ 500 ರಿಂದ 1,000 ವರ್ಷಗಳಷ್ಟು ಹಳೆಯದಾದ ಕೃಷಿ ಭೂಮಿಗಳು, ದೇವಾಲಯದ ಆಸ್ತಿಗಳು ಮತ್ತು ದಾಖಲೆಗಳನ್ನು ಹೊಂದಿರುವ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಹೇಗೆ ಘೋಷಿಸಲಾಗುತ್ತಿದೆ ಎಂಬುದರ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.

1920 ಅಥವಾ 1930 ರ ದಶಕದಿಂದ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಸರ್ಕಾರವು ಕಂದಾಯ ಇಲಾಖೆಗೆ ನೀಡಿರುವ ನಿರ್ದೇಶನ ತಾತ್ಕಾಲಿಕವಾಗಿದೆ.

ಯಾವುದೇ ದಾಖಲೆಗಳಿಲ್ಲದೆ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗುತ್ತಿದ್ದು, ನ್ಯಾಯಮಂಡಳಿ ತೀರ್ಪಿನ ನಂತರ ಸಂತ್ರಸ್ತರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ಗಂಭೀರ ಸಮಸ್ಯೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಸಮಿತಿಯು ಈಗಾಗಲೇ ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಶುಕ್ರವಾರ ಸಮಿತಿಯು ಭುವನೇಶ್ವರ ಮತ್ತು ಕೋಲ್ಕತ್ತಾದಂತಹ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ತನ್ನ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT