ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು

ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: 11 ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬಳು ಹಲ್ಲೆ ನಡೆಸಿ, ಹಲ್ಲು ಮುರಿಯುವಂತೆ ಹೊಡೆದಿರುವ ಘಟನೆಯೊಂದು ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.

ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ನ.7ರಂದು ಅಶ್ವಿನ್ ಜೊತೆ ಇತರ ವಿದ್ಯಾರ್ಥಿಗಳು ತರಗತಿಯಲ್ಲಿ ಗೋಸ್ಮಿಕ್ (ಗಮ್) ಮತ್ತು ನೀರು ಚೆಲ್ಲುತ್ತಾ ಆಡುತ್ತಿದ್ದರು. ಈ ವಿಚಾರವನ್ನು ಶಿಕ್ಷಕಿ ಅಸ್ಮತ್ ಅವರಿಗೆ ತಿಳಿಸಲು ಅಶ್ವಿನ್ ತೆರಳಿದ್ದು, ಅಶ್ವಿನ್ ಮುಖಕ್ಕೆ ಶಿಕ್ಷಕಿ ಕೋಲಿನಿಂದ ಹೊಡೆದಿದ್ದಾರೆ. ಈ ವೇಳೆ ಹಲ್ಲು ಮುರಿದಿದೆ. ನಂತರ ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಪೋಷಕರಿಗೆ ವಿಚಾರ ತಿಳಿಸಿ, ಕ್ಷಮೆ ಯಾಚಿಸಿದ್ದಾರೆಂದು ತಿಳಿದುಬಂದಿದೆ.

ಶಿಕ್ಷಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ