ಸಿಎಂ ಸಿದ್ದರಾಮಯ್ಯ  
ರಾಜ್ಯ

ವಕ್ಫ್ ಭೂಮಿ ವಿವಾದ: ರೈತರಿಗೆ ನೀಡಿದ್ದ ನೊಟೀಸ್ ಹಿಂಪಡೆಯಲು ಸರ್ಕಾರ ಅಧಿಕೃತ ಆದೇಶ

ಹಲವಾರು ರೈತರು ಮತ್ತು ಇತರ ಜನರು ತಮ್ಮ ಆಸ್ತಿಗಳನ್ನು ವಕ್ಫ್ ಮಂಡಳಿ ಹೆಸರಿಗೆ ದಾಖಲೆ ಮಾಡಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ಪರಿವರ್ತನೆ ಪ್ರಕ್ರಿಯೆ(Mutation process) ಮತ್ತು ನೋಟಿಸ್‌ಗಳನ್ನು ಹಿಂಪಡೆಯಲು ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದ ಬೆನ್ನಲ್ಲೇ ರೈತರಿಗೆ ಮತ್ತು ಇತರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.

ಹಲವಾರು ರೈತರು ಮತ್ತು ಇತರ ಜನರು ತಮ್ಮ ಆಸ್ತಿಗಳನ್ನು ವಕ್ಫ್ ಮಂಡಳಿ ಹೆಸರಿಗೆ ದಾಖಲೆ ಮಾಡಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ಪರಿವರ್ತನೆ ಪ್ರಕ್ರಿಯೆ(Mutation process) ಮತ್ತು ನೋಟಿಸ್‌ಗಳನ್ನು ಹಿಂಪಡೆಯಲು ಸೂಚಿಸಿದ್ದಾರೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು, ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೆ ಸಿಎಂ ಸೂಚನೆ ನೀಡಿದ್ದರು. ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆಡಳಿತ ಮತ್ತು ವಿಪಕ್ಷಗಳ ವಿರುದ್ಧ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್​ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನು ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ನಿರ್ದೇಶನದ ನಂತರವೂ ಯಾವುದೇ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡುವುದು ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್