ಹತ್ಯೆ (ಸಾಂಕೇತಿಕ ಚಿತ್ರ) online desk
ರಾಜ್ಯ

ವಿಧವೆಯೊಂದಿಗೆ ಸಂಬಂಧ; ಗೆಳೆಯನ ಹತ್ಯೆ; ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಿಕೃತಿ!

ಇಬ್ಬರು ಯುವಕರು ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವಿಸಿದ ನಂತರ ಮತ್ತೊಂದು ಸುತ್ತು ಮದ್ಯ ಸೇವಿಸಲು ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಿಜಯಪುರ: ಕುಡಿದ ಅಮಲಿನಲ್ಲಿ ವಿವಾಹಿತ ಮಹಿಳೆಯೊಬ್ಬರ ವಿಚಾರಕ್ಕೆ 21 ವರ್ಷದ ಯುವಕನನ್ನು ಆತನ ಸ್ನೇಹಿತನೇ ಕೊಲೆ ಮಾಡಿ, ತನ್ನ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ಯುವಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಆತನ ಸ್ನೇಹಿತ ಸಂತೋಷ್(23), ಸುನೀಲ್‌ನ ಕತ್ತಿಗೆ ಹಗ್ಗ ಹಾಕಿ ಕತ್ತಿನ ಮೇಲೆ ಕಾಲಿಟ್ಟು ಆತನ ಉಸಿರು ಗಟ್ಟಿಸಿ ಕೊಲೆ ಮಾಡುವ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಜಮೀನಿನಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಇಬ್ಬರು ಯುವಕರು ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವಿಸಿದ ನಂತರ ಮತ್ತೊಂದು ಸುತ್ತು ಮದ್ಯ ಸೇವಿಸಲು ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಜಮೀನಿನಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯ ವಿಚಾರ ಪ್ರಸ್ತಾಪವಾಗಿದೆ. ವಿಧವೆಯೊಂದಿಗೆ ಸಂಬಂಧದ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ಹೋಗಿದ್ದು, ಕೋಪದ ಭರದಲ್ಲಿ ಸಂತೋಷ್, ಸುನೀಲ್ ಕತ್ತಿಗೆ ಹಗ್ಗ ಹಾಕಿ ಕತ್ತಿನ ಮೇಲೆ ಕಾಲಿಟ್ಟು ಆತನ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಕೃತ್ಯವನ್ನು ವಿಡಿಯೋ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ವಿಡಿಯೋ ರೆಕಾರ್ಡ್ ಮಾಡಿದ ನಂತರ, ಆರೋಪಿಯು ಅದನ್ನು ತನ್ನ ಸ್ನೇಹಿತರೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈ ಕೊಲೆಯಲ್ಲಿ ಇನ್ನೊಬ್ಬ ವ್ಯಕ್ತಿಯ ಭಾಗಿಯಾಗಿರುವುದು ಸಹ ಬೆಳಕಿಗೆ ಬಂದಿದೆ. ಆದರೆ ಇದು ಇನ್ನೂ ತನಿಖೆಯ ಹಂತದಲ್ಲಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!