ಪ್ರಜ್ವಲ್ ರೇವಣ್ಣ 
ರಾಜ್ಯ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ!

ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು. ಹೀಗಾಗಿ ಅವರಿಗೆ ಜೈಲೇ ಗತಿಯಾಗಿದೆ.

ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಈ ಮೂಲಕ ಜಾಮೀನು ಸಿಗಬಹುದೆಂಬ ಪ್ರಜ್ವಲ್ ರೇವಣ್ಣ ನಿರೀಕ್ಷೆ ಹುಸಿಯಾಗಿದೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇದೇ ವರ್ಷ ಮೇ ತಿಂಗಳಲ್ಲಿ ಪ್ರಜ್ವಲ್ ಜರ್ಮನಿಯಿಂದ ಹಿಂದಿರುಗಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.

ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ, ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ದೂರಿನಲ್ಲಿ ಆರೋಪಿ ಎಂದು ಹೆಸರಿಸಲಾದ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಾಮಾಡಿದ್ದು, ಮುಂದೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ; ನಾಡದ್ರೋಹಿ MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!

'ಮುಖ್ಯಮಂತ್ರಿಗಳೇ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!

ಬಾಬರ್ ಒಬ್ಬ ಆಕ್ರಮಣಕಾರ, ಬಾಬ್ರಿ ವಿಚಾರವನ್ನು ಭಾರತದ ಭ್ರಾತೃತ್ವ ಭಾವನೆಗೆ ಹೋಲಿಸದಿರಿ...

Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು

SCROLL FOR NEXT