ಸಚಿವ ಈಶ್ವರ ಖಂಡ್ರೆ ಮತ್ತು ಟಾಕ್ಸಿಕ್ ಚಿತ್ರದ ಪೋಸ್ಟರ್  
ರಾಜ್ಯ

'ಟಾಕ್ಸಿಕ್' ಚಿತ್ರ ನಿರ್ಮಾಪಕರ ವಿರುದ್ಧ ಎಫ್ಐಆರ್: ಸಚಿವ ಈಶ್ವರ ಖಂಡ್ರೆ ಹೇಳಿದ್ದೇನು?

ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್‌ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ʼಟಾಕ್ಸಿಕ್‌ʼ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೆಚ್ ​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಚಿತ್ರ ಬಿಡುಗಡೆಗೆ ಅಡ್ಡಿ ಇಲ್ಲ: ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಸ್ಯಾಟೆಲೈಟ್ ಚಿತ್ರಗಳಿಂದ ಕಂಡುಬರುತ್ತಿದೆ. ಮರ ಯಾರು ಕಡಿದಿದ್ದಾರೆ ಎಂದು ಗೊತ್ತಿಲ್ಲ, ತನಿಖೆಯಾಗುತ್ತಿದೆ, ಅರಣ್ಯ ಇಲಾಖೆ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಇದರಿಂದ ಟಾಕ್ಸಿಕ್ ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೆಚ್​ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಸ್ಪಷ್ಟನೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಫ್ರಿಕಾದಲ್ಲಿ ಮತ್ತೊಂದು ದಂಗೆ: ಬೆನಿನ್ ಅಧ್ಯಕ್ಷನ ಪದಚ್ಯುತಿ, ಆಡಳಿತ ಮಿಲಿಟರಿ ವಶಕ್ಕೆ, TV ಯಲ್ಲಿ ಕಾಣಿಸಿಕೊಂಡ ಸೈನಿಕರು ಮಾಡಿದ್ದೇನು?

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ

SCROLL FOR NEXT