ಸಾಂದರ್ಭಿಕ ಚಿತ್ರ 
ರಾಜ್ಯ

ಉಪ ಚುನಾವಣೆ: ಚನ್ನಪಟ್ಟಣದಲ್ಲಿ 29 ಕೋಟಿ ರೂ ಮೌಲ್ಯದ ಮದ್ಯ ಜಪ್ತಿ!

ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ, ಈ ಮೂರು ಕ್ಷೇತ್ರಗಳಲ್ಲಿ ಒಟ್ಟು 33.33 ಕೋಟಿ ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆಯುತ್ತಿದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಜಿದ್ದಾ ಜಿದ್ದಿನ ಅಖಾಡವಾಗಿ ಮಾರ್ಪಟ್ಟಿದ್ದು, ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಎನ್ ಡಿಎ ಅಭ್ಯರ್ಥಿಯಾಗಿ ಹಾಗೂ ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ಪ್ರಕಾರ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ, ಈ ಮೂರು ಕ್ಷೇತ್ರಗಳಲ್ಲಿ ಅಕ್ಟೋಬರ್ 16 ರಿಂದ ನವೆಂಬರ್ 11 ರವರೆಗೆ ಪೊಲೀಸರು, ಅಬಕಾರಿ ಮತ್ತು ಇತರ ಅಧಿಕಾರಿಗಳು ಒಟ್ಟು 33.33 ಕೋಟಿ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಪೈಕಿ ಚನ್ನಪಟ್ಟಣದಲ್ಲಿಯೇ ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.

ಶಿಗ್ಗಾಂವಿಯಲ್ಲಿ 300 ಲೀಟರ್‌ಗಿಂತ ಹೆಚ್ಚು ಮದ್ಯ ಮತ್ತು ಸಂಡೂರಿನಲ್ಲಿ 2926 ಲೀಟರ್ ಮದ್ಯ ಹಾಗೂ ಚನ್ನಪಟ್ಟಣದಲ್ಲಿ 2,95,395 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ.

ಇದೇ ವೇಳೆ ಶಿಗ್ಗಾಂವಿಯಲ್ಲಿ 8.2 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಶಿಗ್ಗಾಂವ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಸುಮಾರು 770 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಏಳು ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಸಿದ್ಧರಾಗಿದ್ದಾರೆ. ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT