ಚನ್ನಪಟ್ಟಣ ಮತದಾರರು 
ರಾಜ್ಯ

Karnataka Bypolls LIVE: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಬೊಂಬೆ ನಾಡಿನಲ್ಲಿ ದಾಖಲೆಯ ಮತದಾನ

ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಮತದಾನ ಅಂತ್ಯ, ಚನ್ನಪಟ್ಟಣದಲ್ಲಿ ದಾಖಲೆಯ ಶೇ. 88 ರಷ್ಟು ಮತದಾನ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 76.9 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೊಂಬೆ ನಾಡು ಚನ್ನಪಟ್ಟಣದಲ್ಲಿ ದಾಖಲೆಯ ಶೇ. 88.80 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.

ಇನ್ನೂ ಸಂಡೂರಿನಲ್ಲಿ ಶೇ.76.24 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಸಂಡೂರಿನಲ್ಲಿ 98 ವರ್ಷದ ವೃದ್ಧ ಮಹಿಳೆ ವ್ಹೀಲ್ ಚೇರ್ ನಲ್ಲಿ ಬಂದು ತಮ್ಮ ಮತಹಕ್ಕು ಚಲಾಯಿಸಿದರು.

ಶಿಗ್ಗಾಂವಿಯಲ್ಲಿಶೇ.10.08ರಷ್ಟು ಮತದಾನ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚುನಾವಣೆಯ‌ ಮತದಾನ ಚುರುಕಿನಿಂದ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶೇ. 10.08ರಷ್ಟು ಮತದಾನವಾಗಿದೆ.

ಚನ್ನಪಟ್ಟಣದಲ್ಲಿ ಶೇ.10.34ರಷ್ಟುಮತದಾನ

ಚನ್ನಪಟ್ಟಣ ಹಾಗೂ ಸಂಡೂರು ಉಪಚುನಾವಣೆಯ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.10.34 ಹಾಗೂ ಸಂಡೂರಿನಲ್ಲಿ 9.99ರಷ್ಟು ಮತದಾನವಾಗಿದೆ.

ಪುತ್ರನೊಂದಿಗೆ ಮತ ಹಕ್ಕು ಚಲಾಯಿಸಿದ ಸಂಸದ ಬೊಮ್ಮಾಯಿ

ಪುತ್ರ ಹಾಗೂ ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರೊಂದಿಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು.

ಚನ್ನಪಟ್ಟಣದಲ್ಲಿ ಶೇ.48ರಷ್ಟು ಮತದಾನ

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ಚನ್ನಪಟ್ಟಣದಲ್ಲಿ ಶೇ.48.15ರಷ್ಟು, ಸಂಡೂರಿನಲ್ಲಿ ಶೇ.43.46 ಹಾಗೂ ಶಿಗ್ಗಾಂವಿಯಲ್ಲಿ ಶೇ.44.35ರಷ್ಟು ಮತದಾನವಾಗಿದೆ.

ಮಧ್ಯಾಹ್ನ 3 ಗಂಟೆಯವರೆಗೆ ಶೇ. 61 ರಷ್ಟು ಮತದಾನ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆಯುತ್ತಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ. 61 ರಷ್ಟು ಮತದಾನವಾಗಿದೆ.

ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಮತದಾನ

ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೊಂಬೆ ನಾಡು ಚನ್ನಪಟ್ಟಣದಲ್ಲಿ ಮಧ್ಯಾಹ್ನ ಮೂರು ಗಂಟೆಯವರೆಗೆ ಶೇ. 67.63 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಧ್ಯಾಹ್ನ 3 ಗಂಟೆಯವರೆಗೆ ಒಟ್ಟು 157541 ಮತಗಳು ಚಲಾವಣೆಯಾಗಿದ್ದು, ಈ ಪೈಕಿ 72067 ಪುರುಷರು ಹಾಗೂ 85473 ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇನ್ನು ಸಂಡೂರಿನಲ್ಲಿ ಶೇ.58.27 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.59.62ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚನ್ನಪಟ್ಟಣದಲ್ಲಿ ದಾಖಲೆಯ ಮತದಾನ

ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೊಂಬೆ ನಾಡು ಚನ್ನಪಟ್ಟಣದಲ್ಲಿ ದಾಖಲೆಯ ಮತದಾನವಾಗಿದ್ದು, ಸಂಜೆ ಗಂಟೆಯವರೆಗೆ ಶೇ. 84.26 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನೂ ಸಂಡೂರಿನಲ್ಲಿ ಶೇ.71.47 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT