ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮನೆಯಲ್ಲಿ ಒಂಟಿ ಮಹಿಳೆ ಹತ್ಯೆ; ಮಗ, ಸೋದರಳಿಯನ ಬಂಧನ

ನವೆಂಬರ್ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಉಮೇಶ್ ತನ್ನ ತಾಯಿಯ ಮನೆಗೆ ಹೋಗಿ ಹಣ ನೀಡಲಿಲ್ಲ ಎಂದು ಜಗಳವಾಡಿದ್ದಾನೆ. ತೀವ್ರ ವಾಗ್ವಾದದಲ್ಲಿ ಆಕೆಯ ಮುಖಕ್ಕೆ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬೆಂಗಳೂರು: ಹೊಂಗಸಂದ್ರದಲ್ಲಿ ನ.8ರಂದು ನಡೆದ ಒಂಟಿ ಮಹಿಳೆಯ ಹತ್ಯೆ ಪ್ರಕರಣದಲ್ಲಿ ಮಹಿಳೆಯ ಮಗ ಮತ್ತು ಆಕೆಯ ಸೋದರಳಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಕಿರಿಯ ಮಗ ಉಮೇಶ್ ಮತ್ತು ಆಕೆಯ ಸೋದರಳಿಯ ಸುರೇಶ್ ಬಂಧಿತರು.

ಜಯಮ್ಮ ಎಂಬ ಮಹಿಳೆ ಇತ್ತೀಚೆಗೆ ಆಸ್ತಿ ಮಾರಾಟ ಮಾಡಿದ್ದು, ಆಟೋರಿಕ್ಷಾ ಚಾಲಕ ಉಮೇಶ್‌ಗೆ ಪಾಲು ಕೊಡಲು ನಿರಾಕರಿಸಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಅವರ ಹಿರಿಯ ಮಗ ಆನೇಕಲ್‌ನಲ್ಲಿದ್ದು, ಕೆಎಸ್‌ಆರ್‌ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ತಮಿಳುನಾಡಿನ ಜಯಮ್ಮ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನವೆಂಬರ್ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಉಮೇಶ್ ತನ್ನ ತಾಯಿಯ ಮನೆಗೆ ಹೋಗಿ ಹಣ ನೀಡಲಿಲ್ಲ ಎಂದು ಜಗಳವಾಡಿದ್ದಾನೆ. ತೀವ್ರ ವಾಗ್ವಾದದಲ್ಲಿ ಆಕೆಯ ಮುಖಕ್ಕೆ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಮರುದಿನ ಕಟ್ಟಡದ ಮಾಲೀಕರು ಜಯಮ್ಮ ಅವರ ಮನೆಯ ಮುಂಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹತ್ಯೆಗೆ ಸಹಾಯ ಮಾಡಿದ್ದಕ್ಕಾಗಿ ಸುರೇಶ್ ನನ್ನು ಬಂಧಿಸಲಾಗಿದೆ. ಬೊಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್