ಸಲ್ಮಾನ್ ಖಾನ್, ಸುಹೇಲ್‌ ಪಾಷಾ 
ರಾಜ್ಯ

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ; ರಾಯಚೂರಿನಲ್ಲಿ ಗೀತೆ ರಚನೆಕಾರ ಬಂಧನ!

ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರದ ಗೀತ ರಚನೆಕಾರನಾಗಿರುವ ಸುಹೇಲ್‌, ತನ್ನ ಹೊಸ ಹಾಡನ್ನು ಜನಪ್ರಿಯ ಮಾಡುವ ನಿಟ್ಟಿನಲ್ಲಿ ಇಂಥದ್ದೊಂದು ಬೆದರಿಕೆ ಹಾಕಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ರಾಯಚೂರು: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಕರ್ನಾಟಕದಿಂದಲೂ ಜೀವ ಬೆದರಿಕೆ ಸಂದೇಶ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್‌ ಖಾನ್‌ರಿಂದ 5 ಕೋಟಿ ರೂ.ಗೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಹಾವೇರಿಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಇದೀಗ ಇಂತಹದ್ದೇ ಸಂದೇಶ ಕಳುಹಿಸಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಮಾನ್ವಿಯ ಸುಹೇಲ್‌ ಪಾಷಾ (24) ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರದ ಗೀತ ರಚನೆಕಾರನಾಗಿರುವ ಸುಹೇಲ್‌, ತನ್ನ ಹೊಸ ಹಾಡನ್ನು ಜನಪ್ರಿಯ ಮಾಡುವ ನಿಟ್ಟಿನಲ್ಲಿ ಇಂಥದ್ದೊಂದು ಬೆದರಿಕೆ ಹಾಕಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ನ.7ರಂದು ಮುಂಬೈ ಸಂಚಾರಿ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಾಪ್‌ ಸಹಾಯವಾಣಿಗೆ ಸಂದೇಶ ಕಳುಹಿಸಿದ್ದ ಸುಹೇಲ್‌, 5 ಕೋಟಿ ರೂ. ಕೊಡದಿದ್ದರೆ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲಾಗುವುದು, ಅಲ್ಲದೇ ‘ಮೈ ಸಿಕಂದರ್‌ ಹೂಂ' ಹಾಡು ಬರೆದವರನ್ನೂ ಹತ್ಯೆ ಮಾಡಲಾಗುವುದು’ ಎಂದು ಬೆದರಿಕೆ ಹಾಕಿದ್ದ. ಸಂದೇಶ ಬಂದ ವಾಟ್ಸಾಪ್‌ ಸಂಖ್ಯೆ ಬೆನ್ನಟ್ಟಿದ ಮುಂಬೈ ಪೊಲೀಸರಿಗೆ ಅದು ವೆಂಕಟ ನಾರಾಯಣ ಎಂಬುವರ ಸಂಖ್ಯೆಯಿಂದ ರವಾನೆಯಾಗಿದ್ದು ಕಂಡುಬಂದಿತ್ತು. ಆದರೆ ತನಿಖೆ ವೇಳೆ ವೆಂಕಟ್‌ರ ಮೊಬೈಲ್‌ನಲ್ಲಿ ಇಂಟರ್‌ನೆಟ್‌ ಸಂಪರ್ಕವೇ ಇರಲಿಲ್ಲ ಎಂಬುದು ಪತ್ತೆಯಾಗಿತ್ತು.

ಈ ಬಗ್ಗೆ ಅವರನ್ನು ವಿಚಾರಿಸಿದಾಗ ಅಪರಿಚಿತನೊಬ್ಬ ಕರೆ ಮಾಡುವ ಉದ್ದೇಶದಿಂದ ತನ್ನ ಮೊಬೈಲ್‌ ಪಡೆದಿದ್ದ ಎಂದು ವೆಂಕಟ್‌ ತಿಳಿಸಿದ್ದರು. ಜೊತೆಗೆ ಮೊಬೈಲ್‌ ಪರಿಶೀಲನೆ ವೇಳೆ ಮೊಬೈಲ್‌ಗೆ ವಾಟ್ಸಾಪ್‌ ಇನ್‌ಸ್ಟಾಲ್‌ ಮಾಡಲು ಒಟಿಪಿ ಬಂದಿದ್ದ ವಿಷಯ ಪತ್ತೆಯಾಗಿತ್ತು. ಅದರ ಜಾಡು ಹಿಡಿದು ತೆರಳಿದಾಗ ಆರೋಪಿ ಸುಹೇಲ್‌, ನಾರಾಯಣ ಅವರ ಮೊಬೈಲ್‌ ಸಂಖ್ಯೆ ಬಳಸಿ ತನ್ನ ಮೊಬೈಲ್‌ನಲ್ಲಿ ವಾಟ್ಸಾಪ್‌ ಇನ್‌ಸ್ಟಾಲ್‌ ಮಾಡಿದ್ದ. ಇದಕ್ಕಾಗಿಯೇ ಆತ ವೆಂಕಟ್‌ ಅವರ ಮೊಬೈಲ್‌ ಪಡೆದು ಅದರ ಮೂಲಕ ಒಟಿಪಿ ಪಡೆದುಕೊಂಡಿದ್ದ ಎಂಬುದು ಖಚಿತಪಟ್ಟಿತ್ತು.

ಈ ಸುಳಿವಿನ ಆಧಾರದ ಮೇಲೆ ಮಾನ್ವಿಗೆ ತೆರಳಿದ ಪೊಲೀಸರು ಸುಹೇಲ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ತನ್ನ ಹೊಸ ಹಾಡು 'ಮೈ ಸಿಕಂದರ್‌ ಹೂಂ’ ಜನಪ್ರಿಯಗೊಳಿಸುವ ಸಲುವಾಗಿ ಸಂದೇಶ ಕಳಿಸಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಪಾಷಾ ಅವರನ್ನು ಮಂಗಳವಾರ ತಡರಾತ್ರಿ ಮುಂಬೈಗೆ ಕರೆದೊಯ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT