ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಸರ್ಕಾರದಿಂದ ನೀರಿನ ಮೇಲೆ ಗ್ರೀನ್ ಸೆಸ್ ವರದಿ ತಳ್ಳಿಹಾಕಿದ ಡಿಸಿಎಂ ಡಿಕೆ ಶಿವಕುಮಾರ್

"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್‌ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.

ಬೆಂಗಳೂರು: ಪಟ್ಟಣ ಮತ್ತು ನಗರಗಳಲ್ಲಿನ ನೀರಿನ ಬಿಲ್‌ಗಳ ಮೇಲೆ ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಮತ್ತು ಬಿಜೆಪಿ ಈ "ಬೋಗಸ್ ಸುದ್ದಿ"ಯನ್ನು ಹರಡಿದೆ ಎಂದು ಕಿಡಿಕಾರಿದ್ದಾರೆ.

"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್‌ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.

ಪರಿಸರ-ಸೂಕ್ಷ್ಮ ಪಶ್ಚಿಮ ಘಟ್ಟಗಳನ್ನು ಉಳಿಸುವ ಸಲುವಾಗಿ, ಕರ್ನಾಟಕದ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಾರ್ಪಸ್ ನಿಧಿಯನ್ನು ಸಂಗ್ರಹಿಸಲು "2 ಅಥವಾ 3 ರೂ ." ಹಸಿರು ಸೆಸ್ ವಿಧಿಸುವ ಪ್ರಸ್ತಾಪ ಮಾಡಿದೆ ಎಂಬ ವರದಿಗಳಿಗೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.

ಪಶ್ಚಿಮ ಘಟ್ಟಗಳು ಕೇವಲ ಜೈವಿಕ ವೈವಿಧ್ಯತೆಯ ತಾಣವಾಗಿರದೆ ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಇತರ ನದಿಗಳ ಮೂಲವಾಗಿವೆ. ಈ ನದಿಗಳು ರಾಜ್ಯದ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಪೂರೈಸುತ್ತವೆ.

ಈ ಮಧ್ಯೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ನಂತರ ನಿಮಗೆ ಪ್ರತಿಕ್ರಿಯಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT