ನಟ ದರ್ಶನ್  
ರಾಜ್ಯ

ದರ್ಶನ್ ಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ಒಪ್ಪಿಗೆ

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಅದಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಹೈಕೋರ್ಟ್​ ಬೆನ್ನು ನೋವಿನ ಚಿಕಿತ್ಸೆಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಅದಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆರೋಪಿ ಆಗಿದ್ದಾರೆ. ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ಈಗ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.

ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ. ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT