ನೂತನ ಬಸ್ ಗಳಿಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ 
ರಾಜ್ಯ

NWKRTC: 127 ನೂತನ ಬಸ್ ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ

ಹುಬ್ಬಳ್ಳಿ : ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ನೂತನ 127 ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಲ್ಲದೇ ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ. 1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು, ಯುಪಿಐ ಮೂಲಕ ಪ್ರಯಾಣಿಕರು ಟಿಕೆಟ್ ಪಡೆಯಬಹುದಾಗಿದೆ. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್‌ಗಳನ್ನು ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಉಳಿದ ಬಸ್‌ಗಳು ಬರಲಿವೆ. ಶಕ್ತಿ ಯೋಜನೆಯು ಭಾರತ ದೇಶದಲ್ಲಿ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ. ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮುಂದುವರೆಯಲಿವೆ. ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿ ರೂ.5 ಲಕ್ಷದ ಬದಲಾಗಿ ರೂ.10 ಲಕ್ಷ ನೀಡಬೇಕು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT