ಸಾಂದರ್ಭಿಕ ಚಿತ್ರ 
ರಾಜ್ಯ

Bengaluru Murder: ಮೊಬೈಲ್ ವಿಚಾರಕ್ಕೆ ತಂದೆಯಿಂದಲೇ 14 ವರ್ಷದ ಮಗನ ಕೊಲೆ!

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಕಾಶಿ ನಗರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಬಾಲಕನನ್ನು 14 ವರ್ಷದ ತೇಜಸ್ ಎಂದು ಗುರುತಿಸಲಾಗಿದ್ದು, ಹತ್ಯೆ ಮಾಡಿದ ತಂದೆಯನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಂದೆಯೋರ್ವ ತನ್ನ 14 ವರ್ಷದ ಮಗನನ್ನೇ ಕೊಂದು ಹಾಕಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಕಾಶಿ ನಗರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಬಾಲಕನನ್ನು 14 ವರ್ಷದ ತೇಜಸ್ ಎಂದು ಗುರುತಿಸಲಾಗಿದ್ದು, ಹತ್ಯೆ ಮಾಡಿದ ತಂದೆಯನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ.

ಮೊಬೈಲ್ ವಿಚಾರಕ್ಕೆ ಜಗಳ

ಮೂಲಗಳ ಪ್ರಕಾರ, ತೇಜಸ್ ಮತ್ತು ರವಿಕುಮಾರ್ ನಡುವೆ ಮೊಬೈಲ್ ವಿಚಾರಕ್ಕೆ ಜಗಳವಾಗಿದ್ದು, ಮೊಬೈಲ್ ಕೊಡಿಸುವಂತೆ ತೇಜಸ್ ಹಠ ಮಾಡಿದ ಎಂದು ಕೋಪಗೊಂಡ ತಂದೆ ರವಿಕುಮಾರ್ ಆತನಿಗೆ ಮನಸೋ ಇಚ್ಛ ಥಳಿಸಿದ್ದಾನೆ. ಸರಿಯಾಗಿ ಓದಲು ಆಗಲ್ಲ, ಶಾಲೆಗೆ ಹೊಗಲ್ಲ ಮೊಬೈಲ್ ಅಂತ ಗಲಾಟೆ ಶುರು ಮಾಡಿದ್ದಾನೆ.

ಇದಾದ ಬಳಿಕ ಗಲಾಟೆ ವಿಕೋಪಕ್ಕೆ ತೆರಳಿದ್ದು, ಕುಡಿದ ಅಮಲಿನಲ್ಲಿದ್ದ ರವಿಕುಮಾರ್ ಮಗನನ್ನು ಗೋಡೆಗೆ ತಳ್ಳಿದ್ದಾನೆ. ಈ ವೇಳೆ ಮಗ ತೇಜಸ್‌ಗೆ ಬಲವಾಗಿ ಪೆಟ್ಟಾಗಿದೆ. ಅದಾದ ಬಳಿಕ ಪೋಷಕರು ಮಗನನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ತೇಜಸ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಪೊಲೀಸರು ಭೇಟಿ ನೀಡಿ ಘಟನಾ ಸಂಬಂಧ ಪರಿಶೀಲನೆ ನಡೆಸಿದ್ದಾರೆ. ರವಿಕುಮಾರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?