ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಹಿಟ್ ಅಂಡ್ ರನ್ ಪ್ರಕರಣ; ಆರೋಪಿ ಬಂಧನ

ಬೆಳಪುವಿನ ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಬಂಧಿತ ಆರೋಪಿ. ಅವರು ಚಲಾಯಿಸುತ್ತಿದ್ದ ಕಾರು ಮೊಹಮ್ಮದ್ ಹುಸೇನ್ ಎಂಬವರ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಆದರೆ ಅವರು ಕಾರು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದರು.

ಉಡುಪಿ: ಕಾಪು ತಾಲೂಕಿನ ಬೆಳಪು ಸೈನಿಕ ಕಾಲೋನಿಯಲ್ಲಿ ನ.13ರಂದು ನಡೆದಿದ್ದ ಹಿಟೋ ಅಂಡ್ ರನ್ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದರು.

ಬೆಳಪುವಿನ ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಬಂಧಿತ ಆರೋಪಿ. ಅವರು ಚಲಾಯಿಸುತ್ತಿದ್ದ ಕಾರು ಮೊಹಮ್ಮದ್ ಹುಸೇನ್ ಎಂಬವರ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಆದರೆ ಅವರು ಕಾರು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದರು. ಅಪಘಾತದಲ್ಲಿ ಹುಸೇನ್ (39) ಮೃತಪಟ್ಟಿದ್ದರು.

ತೀವ್ರವಾಗಿ ಗಾಯಗೊಂಡ ಹುಸೇನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರ ಗಾಯಗಳಿಂದಾಗಿ ಅವರು ಅಲ್ಲಿಯೇ ಸಾವನ್ನಪ್ಪಿದ್ದರು. ತನಿಖೆ ನಡೆಸಿದಾಗ ಎಸ್ ಯುವಿ ಪ್ರಜ್ವಲ್ ಶೆಟ್ಟಿ ಅವರದ್ದು ಎಂದು ತಿಳಿದುಬಂದಿತ್ತು.

ನಂತರ ಹಿಟ್ ಅಂಡ್ ರನ್ ಪ್ರಕರಣದ ಆರೋಪದ ಮೇಲೆ ಪ್ರಜ್ವಲ್ ಶೆಟ್ಟಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!