ಬಿ.ವೈ. ವಿಜಯೇಂದ್ರ, ಸಿಟಿ ರವಿ ಮತ್ತಿತರರು 
ರಾಜ್ಯ

ವಕ್ಫ್ ವಿವಾದ: ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಗಳಲ್ಲಿ BJP ಹೋರಾಟ

ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದ್ದಾರೆ.

ಬೆಂಗಳೂರು: ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನವೆಂಬರ್ 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು, ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದ್ದಾರೆ.

ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದ ಮೂರು ತಂಡಗಳಲ್ಲಿ ರಾಜ್ಯದ ಕೇಂದ್ರ ಸಚಿವರು, ಮಾಜಿ ಸಿಎಂಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮುಖಂಡರು ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರನ್ನು ಬೆಳಿಗ್ಗೆಯಿಂದ ಸಂಜೆತನಕ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡುತ್ತೇವೆ ಎಂದು ಹೇಳಿದರು.

ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ನೈಜ ವರದಿಯನ್ನು ತರಲಿದ್ದೇವೆ ಎಂದು ತಿಳಿಸಿದರು.

ಕೇಂದ್ರದ 3 ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿಯವರು ಸೇರಿ ಪ್ರಮುಖ ನಾಯಕರು ಇರುವ ಪ್ರತಿ ತಂಡವು ಕನಿಷ್ಠ 8-10 ಜಿಲ್ಲೆಗಳನ್ನು ಪ್ರವಾಸ ಮಾಡಲಿದೆ. ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸದನದಲ್ಲಿ ವಾಸ್ತವಿಕ ಸಮಸ್ಯೆಗಳ ಕಡೆ ಬೆಳಕು ಚೆಲ್ಲುವ ಕೆಲಸ ಮಾಡಲಿದೆ. ಡಿಸೆಂಬರ್ ಮೊದಲ ವಾರದಿಂದ ಈ ಪ್ರವಾಸ ಇರುತ್ತದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನೂ ಆಯೋಜಿಸಲಾಗುತ್ತಿದ್ದು, ಸುಮಾರು 50ರಿಂದ 60 ಸಾವಿರ ಸಾರ್ವಜನಿಕರು, ರೈತರನ್ನು ಸೇರಿಸಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಏರ್ಪಡಿಸುತ್ತೇವೆ. ಪ್ರತಿ ಜಿಲ್ಲೆ, ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ವಕ್ಫ್ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆಂದು ವಿವರಿಸಿದರು.

ಇದೇ ವೇಳೆ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯ ನಾಯಕರಾಗಿದ್ದು, ಜಿಲ್ಲೆಗಳಿಗೆ ಭೇಟಿ ನೀಡುವ ತಂಡಗಳಲ್ಲಿ ಅವರೂ ಇದ್ದಾರೆ. ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT