ಸಂಗ್ರಹ ಚಿತ್ರ 
ರಾಜ್ಯ

SSLC ಪದೇ-ಪದೇ ಫೇಲ್: ಕೋಪಗೊಂಡು ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ, ಬಂಧನ

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಪ್ರತಿಮೆ ವಿರೂಪಗೊಳಿಸಿದ ಬಾಲಕನನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಎಸ್​ಎಸ್​ಎಲ್​ಸಿಯಲ್ಲಿ ಪದೇ-ಪದೇ ಫೇಲ್ ಆಗಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ದೇವಸ್ಥಾನದಲ್ಲಿದ್ದ ದೇವರ ವಿಗ್ರಹವನ್ನು ವಿರೂಪಗೊಳಿಸಿರುವ ಘಟನೆ ನಗರದಲ್ಲಿ ವರದಿಯಾಗಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಪ್ರತಿಮೆ ವಿರೂಪಗೊಳಿಸಿದ ಬಾಲಕನನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕ ದೇವರ ಮೇಲೆ ನಂಬಿಕೆ ಇಟ್ಟಿದ್ದ. ಲಕ್ಷ್ಮೀ ಭುವನೇಶ್ವರಿದೇವಿಯನ್ನು ನಿತ್ಯವೂ ಪೂಜಿಸುತ್ತಿದ್ದ. ತಾನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸ್‌ ಆಗಬೇಕೆಂದು ಬೇಡಿಕೊಳ್ಳುತ್ತಿದ್ದ. ಆದರೆ, ಮೂರು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಬಾಲಕ, ಪದೇ-ಪದೇ ಫೇಲ್‌ ಆಗಿದ್ದ. ಹೀಗಾಗಿ ತಾನು ಪೂಜೆ ಮಾಡಿದರೂ, ಬೇಡಿಕೊಂಡರೂ ಪಾಸಾಗಲು ಆಗಲಿಲ್ಲ. ದೇವರು ಕರುಣೆ ತೋರಿಲ್ಲವೆಂದು ಸಿಟ್ಟುಕೊಂಡು, ರಾತ್ರಿ ವೇಳೆ ದೇವಸ್ಥಾನದ ಬಳಿ ಹೋಗಿ, ವಿಗ್ರಹವನ್ನು ವಿರೂಪಗೊಳಿಸಿದ್ದಾನೆಂದು ತಿಳಿದುಬಂದಿದೆ.

ಶುಕ್ರವಾರ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರತಿಮೆ ಧ್ವಂಸಗೊಂಡಿರುವುದು ಕಂಡು ಬಂದಿದೆ. ಬಳಿಕ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಬಳಿಕ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಜೀವನ್ ಭೀಮಾನಗರದಲ್ಲಿ BNS ನ ಸೆಕ್ಷನ್ 196 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 299 (ಧರ್ಮ, ಜನಾಂಗ, ಭಾಷೆ ಮತ್ತು ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT