ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ) 
ರಾಜ್ಯ

Karnataka Weather | ಹವಾಮಾನ ವರದಿ: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ. ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ.

ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ, ಚಾಮರಾಜನಗರ, ಕೋಲಾರದಲ್ಲೂ ಮಳೆ ಬೀಳಲಿದೆ ಎಂದು ಹೇಳಲಾಗಿದೆ.

ಮುಂದಿನ 2 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದ್ದು, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಕುಸಿದ ತಾಪಮಾನ

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ನಗರದ ವಿವಿಧೆಡೆ ತಾಪಮಾನ ಕುಸಿತವಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT