ಸಂಗ್ರಹ ಚಿತ್ರ 
ರಾಜ್ಯ

ಚಳಿಗಾಲದ ಅಧಿವೇಶನ: ಸಚಿವರ ಜೊತೆ ಸಿಎಂ ಸಭೆ, ವಿಪಕ್ಷಗಳ ಅಸ್ತ್ರಕ್ಕೆ ಪ್ರತ್ಯಸ್ತ್ರ ಸಿದ್ಧಪಡಿಸುವಂತೆ ಸೂಚನೆ

ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರೊಂದಿಗೆ ಮಹತ್ವಹ ಚರ್ಚೆ ನಡೆಸಿದರು.

ಬೆಂಗಳೂರು: ಡಿಸೆಂಬರ್ ಎರಡನೇ ವಾರದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ಅಧಿವೇಶನದಲ್ಲಿ ಮುಡಾ, ವಕ್ಫ್, ಆಸ್ತಿ ವಿವಾದ, ಬಿಪಿಎಲ್ ಕಾರ್ಡ್ ರದ್ದು ಹಾಗೂ ವಾಲ್ಮೀಕಿ ನಿಗಮ ಹಗರಣ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಮುಂದಾಗಿದ್ದು, ಇದಕ್ಕೆ ಸಮರ್ಥ ತಿರುಗೇಟು ನೀಡಲು ಪ್ರತ್ಯಸ್ತ್ರ ಸಿದ್ಧಪಡಿಸುವಂತೆ ಸಚಿವರು, ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರೊಂದಿಗೆ ಮಹತ್ವಹ ಚರ್ಚೆ ನಡೆಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಐಟಿ/ಬಿಟಿ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಕೆಲವು ಹಿರಿಯ ಸಚಿವರು ಉಪಸ್ಥಿತರಿದ್ದರು.

ಸಭೆಯಲ್ಲಿ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ ಅನರ್ಹ ಫಲಾನುಭವಿಗಳ ಬಳಿ ಇರುವ ಬಿಪಿಎಲ್ ಕಾರ್ಡ್ ರದ್ದು, ರೈತರಿಗೆ ವಕ್ಫ್ ಬೋರ್ಡ್ ಕಳುಹಿಸಿರುವ ನೋಟಿಸ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಖಾಸಗಿ ವಿಶ್ವವಿದ್ಯಾನಿಲಯ ಮಸೂದೆಗಳು ಮತ್ತು ಠೇವಣಿದಾರರನ್ನು ರಕ್ಷಿಸುವ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಯೋಜಿಸುತ್ತಿದೆ.

ಉಭಯ ಸದನಗಳಲ್ಲಿ ಮಂಡಿಸಲಾಗುವ ಈ ಮಸೂದೆಗಳ ಕುರಿತು ಮುಖ್ಯಮಂತ್ರಿಗಳು ಸಚಿವರು ಹಾಗೂ ಶಾಸಕರ ಸಲಹೆ ಪಡೆದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ -19 ಹಗರಣದ ತನಿಖೆಯನ್ನು ಎಸ್‌ಐಟಿ ವಹಿಸಿಕೊಳ್ಳುವ ಬಗ್ಗೆಯೂ ಅವರು ಚರ್ಚಿಸಿದರು. ತನಿಖಾ ತಂಡದ ಮುಖ್ಯಸ್ಥರಾಗಿರುವ ಅಧಿಕಾರಿಗಳ ಬಗ್ಗೆಯೂ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!