ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವೈದ್ಯಕೀಯ ಪಿಜಿ ಕೋರ್ಸ್‌ಗಳಿಗೆ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ

ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸೋಮವಾರ ಬಿಡುಗಡೆ ಮಾಡಿದೆ.

ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಮತ್ತು ಅಭ್ಯರ್ಥಿಗಳು ತಮ್ಮ ಆದ್ಯತೆಗಳನ್ನು ನವೆಂಬರ್ 23 ರಂದು ಸಂಜೆ 4 ರಿಂದ ನವೆಂಬರ್ 25 ರ ಸಂಜೆ 4 ರವರೆಗೆ ಬಗಲಾವಣೆಗೆ ಅವಕಾಶವ ಹೊಂದಿರುತ್ತಾರೆ.

ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ನವೆಂಬರ್ 26 ರಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುವುದು. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನವೆಂಬರ್ 27 ಮತ್ತು 29 ರ ನಡುವೆ ತಮ್ಮ ಅಂತಿಮ ಆಯ್ಕೆಯನ್ನು ಆರಿಸಿಕೊಳ್ಳಬೇಕು ಮತ್ತು ಡಿಸೆಂಬರ್ 2 ರೊಳಗೆ ಅಗತ್ಯ ಶುಲ್ಕವನ್ನು ಪಾವತಿಸಬೇಕು. ಭರ್ತಿಯಾಗದ ಪದವಿಪೂರ್ವ (ಯುಜಿ) ವೈದ್ಯಕೀಯ ಸೀಟುಗಳು ಮತ್ತು ಉಳಿದ ದಂತ ವೈದ್ಯಕೀಯ ಸೀಟುಗಳಿಗೆ ಮಾರ್ಪಡಿಸುವ ಸುತ್ತು ಮಂಗಳವಾರ ಆರಂಭವಾಗಲಿದೆ. ಈ ಸುತ್ತಿನಲ್ಲಿ ಸೀಟುಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳು ನವೆಂಬರ್ 29 ರಂದು ಮೂಲ ದಾಖಲೆಗಳೊಂದಿಗೆ ಆಯಾ ಕಾಲೇಜುಗಳಿಗೆ ವರದಿ ಮಾಡಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT