ಡಿಸಿಎಂ ಡಿ.ಕೆ ಶಿವಕುಮಾರ್ online desk
ರಾಜ್ಯ

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ: ಉಪಚುನಾವಣೆ ಸೋಲು-ಗೆಲುವು ದೇವರ ಫಲಾಫಲ- ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು?

ಉಡುಪಿ (ಕೊಲ್ಲೂರು): ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ" ಎಂದು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ" ಎಂದರು.

ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಮಣೆ ಹಾಕದೆ ವಲಸಿಗರಿಗೆ ಮಣೆ ಹಾಕಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಚುನಾವಣೆ ವೇಳೆ ಇಲ್ಲಿಗೆ ಬಂದಾಗ ಈ ಬಗ್ಗೆ ಕೆಲವರಿಗೆ ಮಾತು ಕೊಟ್ಟಿದ್ದೆವು. ಸಲ್ಪ ದಿನ ಅವರು ಆಡಳಿತ ಮಾಡಲಿ ಬಿಡಿ" ಎಂದು ಹೇಳಿದರು.

ಬಿಪಿಎಲ್ ಕಾರ್ಡ್; ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ

ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, "ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ" ಎಂದರು. ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, "ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು ಇದರ ಬಗ್ಗೆ ಕೆಲಸ ಮಾಡುತ್ತಾರೆ. ನಾನು ನನಗೆ ಸಂಬಂಧ ಪಟ್ಟ ವಿಚಾರದಲ್ಲಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT