ವಿಧಾನ ಸೌಧ 
ರಾಜ್ಯ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಗುರುವಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಹೆಚ್ಚಿನ ರಜೆಗಳಿವೆ.

ಭಾನುವಾರಗಳಂದು ಗಣರಾಜ್ಯೋತ್ಸವ(ಜ.26), ಯುಗಾದಿ(ಮಾ.30), ಮೊಹರಂ ಕಡೆ ದಿನ(ಜು.6), ಮಹಾಲಯ ಅಮವಾಸ್ಯೆ(ಸೆ.21) ಮತ್ತು ಎರಡನೇ ಶನಿವಾರದಂದು ಕನಕದಾಸ ಜಯಂತಿ(ನ.8) ಬರುತ್ತವೆ. ಹಾಗಾಗಿ, ಆ ರಜೆಗಳ ಬಗ್ಗೆ ಈ ಪಟ್ಟಿಯಲ್ಲಿ ನಮೂದಿಸಿಲ್ಲ.

ರಜಾ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ, ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದಾಗಿದೆ.

2025ನೇ ಸಾಲಿನ ಸರ್ಕಾರಿ ರಜಾ ದಿನಗಳು

14.01.2025, ಮಂಗಳವಾರ. ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ

26.02.2025, ಬುಧವಾರ. ಮಹಾಶಿವರಾತ್ರಿ

31.03.2025, ಸೋಮವಾರ. ಖುತುಬ್-ಎ-ರಂಜಾನ್

10.04.2025, ಗುರುವಾರ. ಮಹಾವೀರ ಜಯಂತಿ

14.04.2025, ಸೋಮವಾರ. ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ

18.04.2025, ಶುಕ್ರವಾರ. ಗುಡ್‌ ಫ್ರೈಡೆ

30.04.2025, ಬುಧವಾರ. ಬಸವ ಜಯಂತಿ, ಅಕ್ಷಯ ತೃತೀಯ

1.05.2025, ಗುರುವಾರ. ಕಾರ್ಮಿಕ ದಿನಾಚರಣೆ

7.06.2025, ಶನಿವಾರ. ಬಕ್ರೀದ್

15.08.2025, ಶುಕ್ರವಾರ. ಸ್ವಾತಂತ್ರ್ಯ ದಿನಾಚರಣೆ

27.08.2025, ಬುಧವಾರ. ವರಸಿದ್ಧಿ ವಿನಾಯಕ ವ್ರತ

5.09.2025, ಶುಕ್ರವಾರ. ಈದ್-ಮಿಲಾದ್

1.10.2025, ಬುಧವಾರ. ಮಹಾನವಮಿ, ಆಯುಧಪೂಜೆ, ವಿಜಯದಶಮಿ

2.10.2025, ಗುರುವಾರ. ಗಾಂಧಿ ಜಯಂತಿ

7.10.2025, ಮಂಗಳವಾರ. ವಾಲ್ಮೀಕಿ ಜಯಂತಿ

20.10.2025, ಸೋಮವಾರ. ನರಕ ಚತುದರ್ಶಿ

22.10.2025, ಬುಧವಾರ. ಬಲಿಪಾಡ್ಯಮಿ, ದೀಪಾವಳಿ

01.11.2025, ಶನಿವಾರ. ಕನ್ನಡ ರಾಜೋತ್ಸವ

25.12.2025, ಗುರುವಾರ. ಕ್ರಿಸ್‌ಮಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್