ಕುಂದಾಪುರದಲ್ಲಿ ಭೀಕರ ರಸ್ತೆ ಅಪಘಾತ 
ರಾಜ್ಯ

ಭೀಕರ ಅಪಘಾತ: ರಿವರ್ಸ್ ಬರುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ; 7 ಮಂದಿಗೆ ಗಂಭೀರ ಗಾಯ, Video Viral

ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

ಉಡುಪಿ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದ್ದು, ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿ ಡಿಕ್ಕಿಹೊಡೆದಿದೆ.

ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರ ಪೈಕಿ ಏಳೂ ಜನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರು. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರೆನ್ನಲಾಗಿದೆ.

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಅಷ್ಟೂ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!

ಜಾರ್ಖಂಡ್‌: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ; ತಾಯಿ, ನವಜಾತ ಶಿಶು ಸಾವು; ಇದಕ್ಕೆ ಯಾರು ಹೊಣೆ?

ದಳಪತಿ ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ನಟಿ ಪೂಜಾ ಹೆಗ್ಡೆ: Video Viral

SCROLL FOR NEXT