ಗಡಿ ಗ್ರಾಮದಲ್ಲಿ ಮತದಾನ 
ರಾಜ್ಯ

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ.

ಬೆಳಗಾವಿ: ಬೆಳಗಾವಿಯ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳ ಉದ್ದಕ್ಕೂ ಮರಾಠಿ ಭಾಷಿಗರನ್ನು ಓಲೈಸಲು ಮಹಾರಾಷ್ಟ್ರದ ರಾಜಕೀಯ ನಾಯಕರು ಚುನಾವಣೆಯ ಸಮಯದಲ್ಲಿ ಭಾಷೆ ಮತ್ತು ಗಡಿ ವಿಷಯಗಳನ್ನು ಮತ್ತೆ ಮತ್ತೆ ತರುತ್ತಾರೆ. ಆದರೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಲಕ್ಷಾಂತರ ಮಂದಿ ಕನ್ನಡ ಮಾತನಾಡುವವರಿದ್ದಾರೆ, ಅವರ ಧ್ವನಿಯನ್ನು ದಶಕಗಳಿಂದ ಹತ್ತಿಕ್ಕಲಾಗಿದೆ.

ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ. ಲಾತೂರ್, ಮಂಗಳವೇಡ್, ಅಕ್ಕಲಕೋಟ, ಜತ್ತ್ ಮತ್ತು ದಕ್ಷಿಣ ಸೊಲ್ಲಾಪುರ ಸೇರಿದಂತೆ ಈ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕನ್ನಡ ಮಾತನಾಡುವ ಜನ ಹೆಚ್ಚು. ಮಹಾರಾಷ್ಟ್ರದ ಈ ಕ್ಷೇತ್ರಗಳಲ್ಲಿ ಕನಿಷ್ಠ 50 ರಿಂದ 60 ಲಕ್ಷ ಕನ್ನಡ ಮಾತನಾಡುವವರಿದ್ದು, ಹೆಚ್ಚಿನವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇದರ ಮಹತ್ವವನ್ನು ಮನಗಂಡ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಪ್ರಮುಖ ಕನ್ನಡಿಗ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಹ್ವಾನಿಸಿದ್ದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಇತ್ತೀಚೆಗೆ ಮಹಾರಾಷ್ಟ್ರದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿತು ಮತ್ತು ಕರ್ನಾಟಕ-ಮಹಾರಾಷ್ಟ್ರ ಗಡಿ ರೇಖೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ಕೇಳಿದೆ. ಕುತೂಹಲಕಾರಿ ಸಂಗತಿಯೆಂದರೆ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತಮ್ಮ ಚುನಾವಣಾ ಭಾಷಣಗಳಲ್ಲಿ ಗಡಿ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಕನ್ನಡ ಮತದಾರರನ್ನು ತಲುಪಲು ಕನ್ನಡದಲ್ಲಿ ಪೋಸ್ಟರ್, ಹ್ಯಾಂಡ್ ಬಿಲ್ ಗಳನ್ನು ಮುದ್ರಿಸಿದರು.

ಮಹಾರಾಷ್ಟ್ರದ ಹಲವು ಗಡಿ ಗ್ರಾಮಗಳಲ್ಲಿ, ಕನ್ನಡ ಭಾಷಿಕರು ತಮ್ಮ ಬಗ್ಗೆ ಸರ್ಕಾರದ ನಿರಾಸಕ್ತಿಯನ್ನು ಖಂಡಿಸಿ ಚಳವಳಿಯನ್ನು ಪ್ರಾರಂಭಿಸಿದರು ಮತ್ತು ತಮ್ಮ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವ ಬಯಕೆಯನ್ನು ವ್ಯಕ್ತಪಡಿಸಿ ಪಂಚಾಯಿತಿಗಳಲ್ಲಿ ನಿರ್ಣಯಗಳನ್ನು ಸಹ ಮಾಡಿದರು. ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಕನ್ನಡ ಭಾಷಿಕರನ್ನು ಓಲೈಸಿದರು, ಕನ್ನಡ ಮಾತನಾಡುವ ಹಳ್ಳಿಗಳಲ್ಲಿ ಆದ್ಯತೆಯ ಆಧಾರದ ಮೇಲೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜತ್ತ ಕ್ಷೇತ್ರದ ಶಾಸಕ ವಿಕ್ರಮಸಿಂಗ್ ಸಾವಂತ್ ಅವರು ಪಕ್ಕದ ಗುಡ್ಡಾಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರ ಆಯೋಜಿಸಿದ್ದ ಸೀಮಂತೋತ್ಸವದಲ್ಲಿ ಪಾಲ್ಗೊಂಡಿದ್ದರು. ಜತ್ತ ತಾಲೂಕಿನ ಉಮದಿ ಗ್ರಾಮದ ನಿವಾಸಿ ಮಲ್ಲೇಶಪ್ಪ ತೇಲಿ ಮಾತನಾಡಿ, ‘ಕನ್ನಡ ಮಾತನಾಡುವವರು ವಾಸಿಸುವ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದಾಗಿ ಎಲ್ಲ ಅಭ್ಯರ್ಥಿಗಳು ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT