ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಪುತ್ತೂರು: ಸರಣಿ ಅಪಘಾತ: 20 ಜನರಿಗೆ ಗಾಯ, ಹಲವು ವಾಹನಗಳು ಜಖಂ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತ (ಸಾಂದರ್ಭಿಕ ಚಿತ್ರ)
Srinivasa Murthy VN
Updated On : 23 Nov 2024, 1:57 pm

ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವು ವಾಹನಗಳು ಜಖಂಗೊಂಡಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

Also Read

ಭೀಕರ ಅಪಘಾತ: ರಿವರ್ಸ್ ಬರುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ; 7 ಮಂದಿಗೆ ಗಂಭೀರ ಗಾಯ, Video Viral

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್​ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Advertisement

Advertisement

ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ‌ ನೀಡಲಾಗುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement