ಸಂಗ್ರಹ ಚಿತ್ರ 
ರಾಜ್ಯ

ಗದಗದಲ್ಲಿ ಹಿಂದೂ-ಮುಸ್ಲಿಂ ಸಾಮರಸ್ಯ; ಬಸವ ಪುರಾಣಕ್ಕೆ ಮುಸ್ಲಿಂ ಬಾಂಧವರಿಗೆ ಆಹ್ವಾನ

ಹಾಲಕರೆಯ ಅಭಿನವ ಅನ್ನದಾನ ಸ್ವಾಮೀಜಿಗಳು ಪಟ್ಟಣದ ಟಕ್ಕೇದ ದರ್ಗಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಮ ಸಮಾಜದ ಆಶಯ ಹಾಗೂ ಶಿಕ್ಷಣ ಮಹತ್ವ ಸಾರಿದ್ದರು.

ಗದಗ: ಹಾಲಕೆರೆ ಅನ್ನದಾನೇಶ್ವರ ಮಠದಲ್ಲಿ ಒಂದು ತಿಂಗಳ ಕಾಲ ನಡೆಯುವ ‘ಬಸವ ಪುರಾಣ’ ಪ್ರವಚನ ಹಾಗೂ ಇತರೆ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳುವಂತೆ ಮುಸ್ಲಿಮರಿಗೆ ಆಹ್ವಾನ ನೀಡಲಾಗಿದೆ.

ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಹಾಲಕೆರೆ ಅನ್ನದಾನೇಶ್ವರ ಮಠ ಗಜೇಂದ್ರಗಡ-ಹಾಲಕೆರೆ ವತಿಯಿಂದ ಆಯೋಜಿಸಿರುವ ಬಸವ ಪುರಾಣ ಅಂಗವಾಗಿ ಜರುಗಿದ ಸಭೆಯಲ್ಲಿ ಹಾಲಕೆರೆಯ ಮುಪ್ಪಿನ ಬಸವಲಿಂಗ ಸ್ವಾಮೀಜಿ ಮುಸ್ಲಿಮರಿಗೆ ಆಹ್ವಾನ ನೀಡಿದರು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಬ್ರಿಟಿಷರು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸಿದರು, ಇದೀಗ ಮಠವು ಇಂತಹ ಕಾರ್ಯಕ್ರಮಗಳ ಮೂಲಕ ವಿಭಜನೆಗೊಂಡ ಜನರನ್ನು ಒಗ್ಗೂಡಿಸಲು ಬಯಸಿದೆ ಎಂದು ಹೇಳಿದರು.

ಟಕ್ಕೇದ ದರ್ಗಾದ ಸೈಯದ್ ನುಜಾಮುದ್ದೀನ ಶಾ ಮಕಾನದಾರ ಮಾತನಾಡಿ, ಹಾಲಕರೆಯ ಅಭಿನವ ಅನ್ನದಾನ ಸ್ವಾಮೀಜಿಗಳು ಪಟ್ಟಣದ ಟಕ್ಕೇದ ದರ್ಗಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಮ ಸಮಾಜದ ಆಶಯ ಹಾಗೂ ಶಿಕ್ಷಣ ಮಹತ್ವ ಸಾರಿದ್ದರು. ಮಠದ ಕೆಲ ಕಾರ್ಯಕ್ರಮಗಳಿಗೂ ಸಹ ಟಕ್ಕೇದ ದರ್ಗಾದ ಪೂಜ್ಯರು ಸಹ ತೆರಳಿದ್ದರೆಂದು ಸ್ಮರಿಸಿದರು.

ನಾವೆಲ್ಲರೂ ಭಾರತೀಯರು, ಆದರೆ ಧರ್ಮಾಂಧರು ಯಾವಾಗಲೂ ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಾರೆ. ಈ ಅವರ ಪ್ರಯತ್ನಗಳನ್ನು ನಾವು ಒಗ್ಗಟ್ಟಿನಿಂದ ವಿಫಲಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಗಜೇಂದ್ರಗಡ ವೀರಶೈವ-ಲಿಂಗಾಯತ ಸಂಘದ ಅಧ್ಯಕ್ಷ ಸಿದ್ದಪ್ಪ ಬಂಡಿ ಮಾತನಾಡಿ, 10 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಒಂದು ತಿಂಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರಿಗೂ ಪ್ರಸಾದ ವಿತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಗದಗ ಹಾಗೂ ಸಮೀಪದ ಜಿಲ್ಲೆಗಳ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.

ಅರುಣ್ ಕುಲಕರ್ಣಿ, ಚಿದಂಬರ ಮತ್ತು ಮಠದ ಇತರ ಭಕ್ತರು ಮಾತನಾಡಿ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಸ್ಲಿಮರು ಒಪ್ಪಿಗೆ ನೀಡಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT