ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ಆಗಿರುವ ಸಾಧ್ಯತೆಗಳಿವೆ: ಸಚಿವ ಪರಮೇಶ್ವರ್

ಕೆಲವು ಬಿಜೆಪಿ ನಾಯಕರೂ ಕೂಡ ಇವಿಎಂಗಳನ್ನು ವಿರೋಧಿಸುತ್ತಿದ್ದಾರೆ, ರಾಜ್ಯದಾದ್ಯಂತ ಇವಿಎಂ ಹ್ಯಾಕ್ ಆಗಿದೆ ಎಂದು ಹೇಳಲು ಸಾಧ್ಯವಿಲ್ಲ, ಆದರೆ, ಕೆಲವೆಡೆ ಹ್ಯಾಕ್ ಆಗುವ ಸಾಧ್ಯತೆಗಳಿವೆ.

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲವೆಡೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಹ್ಯಾಕ್ ಮಾಡಿರುವ ಸಾಧ್ಯತೆಗಳಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಮಹಾರಾಷ್ಟ್ರದ ವೀಕ್ಷಕರೂ ಆಗಿರುವ ಸಚಿವ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಇವಿಎಂ ಬಳಸದಂತೆ ನಾವು ಒತ್ತಾಯಿಸುತ್ತಿದ್ದೇವೆ. ಪೇಪರ್ ಬ್ಯಾಲೆಟ್‌ಗೆ ಮರಳಿ, ಇವಿಎಂಗಳನ್ನು ತೆಗೆದುಹಾಕಬಾರದೇಕೆ? ವಾಸ್ತವವಾಗಿ, ಎಐಸಿಸಿ ಒಂದು ಸಮಿತಿಯನ್ನು ರಚಿಸಿತ್ತು. ಆದರೆ, ಅಧಿಕಾರ ಅವರ ಬಳಿ ಇದೆ (ಕೇಂದ್ರ), ಕೆಲವು ಎನ್‌ಡಿಎ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ನ್ಯಾಯಸಮ್ಮತ ಚುನಾವಣೆಗೆ ಪೇಪರ್ ಬ್ಯಾಲೆಟ್ ವ್ಯವಸ್ಥೆ ತರುವುದು ಮತ್ತು ಇವಿಎಂ ರದ್ದು ಮಾಡುವುದು ಉತ್ತಮವಾಗಿದೆ. ಭಾರತದಲ್ಲಿ ಇವಿಎಂಗೆ ವಿರೋಧವಿದೆ, ಅಮೆರಿಕದಲ್ಲಿಯೂ ಸಹ ವಿರೋಧ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕೆಲವು ಬಿಜೆಪಿ ನಾಯಕರೂ ಕೂಡ ಇವಿಎಂಗಳನ್ನು ವಿರೋಧಿಸುತ್ತಿದ್ದಾರೆ, ರಾಜ್ಯದಾದ್ಯಂತ ಇವಿಎಂ ಹ್ಯಾಕ್ ಆಗಿದೆ ಎಂದು ಹೇಳಲು ಸಾಧ್ಯವಿಲ್ಲ, ಆದರೆ, ಕೆಲವೆಡೆ ಹ್ಯಾಕ್ ಆಗುವ ಸಾಧ್ಯತೆಗಳಿವೆ ಎಂದರು.

ಬಳಿಕ ರಾಜ್ಯದ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ವಿವಿಧ ಹಗರಣಗಳ ಬಗ್ಗೆ ಬಿಜೆಪಿ ನಾಯಕರ ಆರೋಪಗಳ ಬಗ್ಗೆ ಜನರು ತಲೆಕೆಡಿಸಿಕೊಂಡಿಲ್ಲ. ಜನರು ಬಯಸುತ್ತಿರುವುದು ಅಭಿವದ್ಧಿಯಾಗಿದೆ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದೆವು. ಗೆದ್ದಿದ್ದೇವೆಂದು ಹೇಳಿದರು.

ಈ ಫಲಿತಾಂಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು. ನಮ್ಮ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದು, ನಮ್ಮ ಗೆಲುವಿಗೆ ಕಾರಣವಾಗಿದೆ. ನಮ್ಮ ಪೊಲೀಸ್ ಇಂಟಲಿಜೆನ್ಸ್ ಕೂಡ ನಾವು ಗೆಲ್ಲುತ್ತೇವೆ ಎಂದು ಹೇಳಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT