ನಿಖಿಲ್ ಕುಮಾರಸ್ವಾಮಿ-ಅನಿತಾ-ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಚುನಾವಣೆಯಲ್ಲಿ ಸೋತಿದ್ದಾನೆ ಹೊರತು ಮನುಷ್ಯನಾಗಿ ಅಲ್ಲ: ನಿಖಿಲ್ ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ಅನಿತಾ ಕುಮಾರಸ್ವಾಮಿ ಪೋಸ್ಟ್

ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್​ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ ಮೂರು ಚುನಾವಣೆಯಲ್ಲಿ ನಿಖಿಲ್ ಗೆ ಸೋಲಾಗಿದೆ. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿಖಿಲ್ ರನ್ನು ಗೇಲಿ ಮಾಡಲಾಗುತ್ತಿದೆ.

ಇದರ ಬೆನ್ನಲ್ಲೇ ಮಗನ ಹ್ಯಾಟ್ರಿಕ್ ಸೋಲಿನ ಬಗ್ಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್​ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ನನ್ನ ನಗ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡಿದ್ದಾನೆ. ಅದನ್ನು ನಾನು ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ ಎಂದು ಬರೆದುಕೊಂಡಿದ್ದಾರೆ.

ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ. ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ ಎಂದಿದ್ದಾರೆ.

ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು. ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು ಎಂದು ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು ಎಂದು ಅನಿತಾ ಕುಮಾರಸ್ವಾಮಿ ಟ್ವಿಟ್ಟರ್​ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT