ಸಂಗ್ರಹ ಚಿತ್ರ 
ರಾಜ್ಯ

ವಕ್ಫ್ ವಿವಾದ, BPL ಕಾರ್ಡ್ ರದ್ದು ಮತ್ತಿತರ ವಿಷಯಗಳ ಕುರಿತು ಸದನದಲ್ಲಿ ಪ್ರಸ್ತಾಪ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಾರಿ ರಾಜ್ಯ ಸರ್ಕಾರ ಕೇವಲ ಎರಡು ವಾರಗಳ ಅಧಿವೇಶನವನ್ನು ನಿಗದಿಪಡಿಸಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ ಮಾಡಲಾಗುವುದು.

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಡಿ.9ರಿಂದ ಆರಂಭಗೊಳ್ಳಲಿದ್ದು, ಅಧಿವೇಶನ ಹಿನ್ನೆಲೆಯಲ್ಲಿ ವಕ್ಫ್ ವಿವಾದ, ಬಿಪಿಎಲ್ ಕಾರ್ಡ್ ರದ್ದು ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ದ ಮುಗಿಬೀಳಲು ಸಜ್ಜಾಗಿವೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಾರಿ ರಾಜ್ಯ ಸರ್ಕಾರ ಕೇವಲ ಎರಡು ವಾರಗಳ ಅಧಿವೇಶನವನ್ನು ನಿಗದಿಪಡಿಸಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ ಮಾಡಲಾಗುವುದು ಎಂದು ಹೇಳಿದರು.

ವಕ್ಫ್ ಮಂಡಳಿಯಿಂದ ಆಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ಬಡವರ ರೇಷನ್‌ ಕಾರ್ಡ್‌ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು. ಅಬಕಾರಿ ಇಲಾಖೆಯ ಹಗರಣ, ಬೆಳೆನಾಶಕ್ಕೆ ಪರಿಹಾರ ಮೊದಲಾದ ಸಮಸ್ಯೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವಾರಕ್ಕೊಮ್ಮೆ ಎಲ್ಲಾ ಸಚಿವರು ಮತ್ತು ಅಧಿಕಾರಿಗಳು ಭೇಟಿಯಾಗುತ್ತಿದ್ದು, ಇದೊಂದು ರೀತಿ ಗುರುವಾರದ ಸರ್ಕಾರವಾಗಿ ಹೋಗಿದೆ. ಕೇವಲ ಒಂದು ದಿನ ಮಾತ್ರ ಇಲ್ಲಿ ಸಚಿವರು, ಅಧಿಕಾರಿಗಳು ಸಭೆ ಮಾಡುತ್ತಾರೆ. ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆ ಬಗ್ಗೆ ಚರ್ಚಿಸಲು ನಾನು ಸಭೆ ನಡೆಸಲಿದ್ದೇನೆ. ಈ ಹಿಂದೆ ಕಲ್ಯಾಣ ಕರ್ನಾಟಕ ಕುರಿತು ಸರ್ಕಾರದಿಂದ ಸಭೆ ನಡೆದಿದೆ. ಆ ಬಳಿಕ ಯಾವುದೇ ಸುದ್ದಿ ಇಲ್ಲ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ, ಮಳೆ ಬಂದು ಮುಳುಗುವ ಬೆಂಗಳೂರು ಸೃಷ್ಟಿಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿ ಉಂಟಾಗಿ ವಾಹನ ಚಾಲಕರಿಗೆ ಬೆನ್ನು ನೋವು ಉಂಟಾಗಿದೆ. ಜಯನಗರ ಶಾಸಕರು ಸೇರಿದಂತೆ ಅನೇಕ ಶಾಸಕರಿಗೆ ಅನುದಾನ ಕಡಿತವಾಗಿದೆ.

ರಾಜ್ಯದಲ್ಲಿ ಅಧಿಕಾರಿಗಳಿಗೆ ನೇಣಿನ ಭಾಗ್ಯ ನೀಡಲಾಗಿದೆ. ಅಧಿಕಾರಿಗಳು ಒಂದೋ ವರ್ಗಾವಣೆಯಾಗಬೇಕು ಅಥವಾ ನೇಣು ಹಾಕಿಕೊಳ್ಳಬೇಕು ಎಂಬ ಸ್ಥಿತಿ ಇದೆ. ರೌಡಿಗಳನ್ನು ಜೈಲಿಗೆ ಹಾಕುವ ಬದಲು ಪ್ರಕರಣ ಹಿಂಪಡೆಯಲಾಗಿದೆ.ಈ ಎಲ್ಲಾ ವಿಷಯಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್