ಸಿಎಂ ಸಿದ್ದರಾಮಯ್ಯ 
ರಾಜ್ಯ

RSSನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಪ್ರಾಣವನ್ನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್‌ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.

ಬೆಂಗಳೂರು: ಆರ್'ಎಸ್ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ, ಎಲ್ಲ ಮಾಡಿದ್ದು ಮನುಸ್ಮೃತಿ. ಆರ್'ಎಸ್ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಸಂವಿಧಾನವನ್ನು ಅಂಗೀಕರಿಸಿರುವುದಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ಉದ್ಧೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್‌ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ. ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು ಎಂದು ಹೇಳಿದರು.

ಇದೇ ವೇಳೆ ಆರ್'ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ. ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ.

ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು. ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬರು ನೀಡಿದ್ದರು. ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು. ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು.

ಆರ್.ಎಸ್.ಎಸ್ ಬಿಜೆಪಿಯ ಮಾತೃಸಂಸ್ಥೆ. ಇದರ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ ಆರ್.ಎಸ್.ಎಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಈ ಆರ್.ಎಸ್.ಎಸ್ ದೇಶಭಕ್ತಿಯ ಪಾಠ ಮಾಡುತ್ತಿದೆ. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಎಂದು ತಿಳಿಸಿದರು.

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರವು ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸಂವಿಧಾನವು ಇದನ್ನು ಖಾತರಿಪಡಿಸುತ್ತದೆ ಮತ್ತು ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT