ಕಲಬುರಗಿ ಕೇಂದ್ರ ಕಾರಾಗೃಹ (ಸಂಗ್ರಹ ಚಿತ್ರ)  
ರಾಜ್ಯ

ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ!

ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ಸ್ಫೋಟಿಸುವುದಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಆಡಿಯೋ ಸಂದೇಶ ರವಾನಿಸಿದ್ದಾನೆ ಎಂದು ಆರ್.ಅನಿತಾ ಗುರುವಾರ ತಿಳಿಸಿದ್ದಾರೆ.

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ ಎಂಬ ಅನುಮಾನ ಇದೀಗ ಬಲವಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ಸ್ಫೋಟಿಸುವುದಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಆಡಿಯೋ ಸಂದೇಶ ರವಾನಿಸಿದ್ದಾನೆ ಎಂದು ಆರ್.ಅನಿತಾ ಗುರುವಾರ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಯಾರೋ ನನ್ನ ಕಾರನ್ನು ಸ್ಫೋಟಿಸುವುದಾಗಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಆಡಿಯೋ ಸಂದೇಶ ಕಳುಹಿಸಿದ್ದಾರೆ. ನನಗೆ ವೈಯಕ್ತಿಕವಾಗಿ ಇದುವರೆಗೆ ಅಂತಹ ಯಾವುದೇ ಸಂದೇಶ ಬಂದಿಲ್ಲ, ಆದ್ದರಿಂದ ನಾನು ಯಾವುದೇ ಪೊಲೀಸ್ ದೂರು ನೀಡುವುದಿಲ್ಲ, ಬೆದರಿಕೆಯ ನಂತರ, ತಾನು ಈಗ ಇನ್ನೂ ಹೆಚ್ಚು ಜಾಗರೂಕರಾಗಿರುತ್ತೇನೆ ಎಂದು ಅನಿತಾ ಹೇಳಿದರು.

ಕಳೆದ ತಿಂಗಳು, ಅನಿತಾ ಅವರು ಜೈಲಿನ ಮುಖ್ಯ ಅಧೀಕ್ಷಕಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೂವರು ಕೈದಿಗಳು ವಿಶೇಷ ಸೌಲಭ್ಯ ಪಡೆಯುತ್ತಿರುವ ಛಾಯಾಚಿತ್ರಗಳು ಮತ್ತು ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ದಾಳಿ ನಡೆಸಲಾಯಿತು. ಕೈದಿಗಳಿಂದ ಸೆಲ್ ಫೋನ್, ಗುಟ್ಕಾ ಮತ್ತು ಸಿಗರೇಟ್ ಪ್ಯಾಕೆಟ್ ಗಳನ್ನು ಮತ್ತು ಬೀಡಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

SCROLL FOR NEXT