ಬಿಎಸ್ ಯಡಿಯೂರಪ್ಪ PTI
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ಮತ್ತೆ ಸರ್ಕಾರ ಮನವಿ!

ಬೆಂಗಳೂರಿನ ಬಿದರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಸಮುಚ್ಚಯ ಯೋಜನೆಗೆ ಸಂಬಂಧಿಸಿದ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ, ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಜಾಗೊಳಿಸಿದ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈ ಪ್ರಕರಣದಲ್ಲಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ವಿಜಯೇಂದ್ರ ಹಾಗೂ ಇತರ ಸಂಬಂಧಿಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಬೆಂಗಳೂರಿನ ಬಿದರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಸಮುಚ್ಚಯ ಯೋಜನೆಗೆ ಸಂಬಂಧಿಸಿದ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ, ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.

ಬಿಡಿಎ ಗುತ್ತಿಗೆ ಪಡೆಯಲು ಎಂಎಸ್ ರಾಮಲಿಂಗಂ ಕನ್​ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್​ ಕಂಪನಿಗಳಿಂದ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಟಿ.ಜೆ ಅಬ್ರಾಹಂ ಖಾಸಗಿ ದೂರು ನೀಡಿದ್ದರು. ಆದರೆ ಯಡಿಯೂರಪ್ಪ ವಿರುದ್ಧದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಹೀಗಾಗಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ 2021ರ ಜುಲೈ 8ರಂದು ಅಬ್ರಾಹಂ ದೂರನ್ನು ವಜಾಗೊಳಿಸಿತ್ತು.

ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿಸಿ ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT