ಮೃತ ವಿದ್ಯಾರ್ಥಿನಿ ಸಾನ್ವಿ 
ರಾಜ್ಯ

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್‌ವೆಲ್‌ಗೆ ಜೋಡಿಸಲಾಗಿತ್ತು.

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿ.

ಪೊಲೀಸರ ಪ್ರಕಾರ, ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್‌ವೆಲ್‌ಗೆ ಜೋಡಿಸಲಾಗಿತ್ತು. ಪ್ರತ್ಯೇಕವಾಗಿ ಹೆಸ್ಕಾಂನ ವಿತರಣಾ ಮಾರ್ಗದ ಸೇವಾ ಲೈನ್‌ಗೆ ಸಂಪರ್ಕ ಕಲ್ಪಿಸಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ. ಮಕ್ಕಳು ಬಳಸುತ್ತಿದ್ದ ಶೌಚಾಲಯದೊಳಗೆ ತಂತಿ ತುಂಡಾಗಿ ಬಿದ್ದಿತ್ತು. ‘ಶೌಚಾಲಯಕ್ಕೆ ಬಂದಿದ್ದ ಸಾನ್ವಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾಳೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ದುರಂತ ಘಟನೆಯಿಂದ ಸುಮಾರು 50 ಮನೆಗಳ ಇಡೀ ಗ್ರಾಮವೇ ದುಃಖದಲ್ಲಿ ಮುಳುಗಿದೆ. ಅಕ್ರಮ ವಿದ್ಯುತ್ ಸಂಪರ್ಕವನ್ನು ಗಮನಿಸಿದರೂ ಹೆಸ್ಕಾಂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಹಳಿಯಾಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಕಿಯ ಶವವನ್ನು ಹಳಿಯಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಆಸ್ಪತ್ರೆಗೆ ಧಾವಿಸಿ ಬಾಲಕಿಯ ಸಂಬಂಧಿಕರನ್ನು ಭೇಟಿ ಮಾಡಿದರು. ಘಟನೆಗೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಈ ಸಂಬಂಧ ಪೊಲೀಸ್ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!