ಸಿದ್ದರಾಮಯ್ಯ ಹಾಗೂ ವಿಜಯೇಂದ್ರ 
ರಾಜ್ಯ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ; ಆರೋಗ್ಯ ಇಲಾಖೆಗೆ ಚಿಕಿತ್ಸೆ ಬೇಕು: ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ.

ಬೆಂಗಳೂರು: ಬಳ್ಳಾರಿ, ದಾವಣಗೆರೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವಿನ ಆರೋಪಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಗುರಿಯಾಗಿಸಿ ರಾಜ್ಯ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಇಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯ, ಉದಾಸೀನತೆಯಲ್ಲಿ ಮೈಮರೆತ ಪರಿಣಾಮ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ! ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್‌ನಲ್ಲಿ ಐವರ ಬಾಣಂತಿಯರ ಸಾವು, ದಾವಣಗೆರೆಯಲ್ಲಿ ಹಸುಗೂಸುಗಳ ಸರಣಿ ಸಾವು, ಬೆಳಗಾವಿ, ಬೆಂಗಳೂರಿನ ಆಸ್ಪತ್ರೆಯಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ಕಟುಕ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಬೆಂಕಿ ಬಿದ್ದಾಗ ಶೌರ್ಯ ಪ್ರದರ್ಶಿಸುವ ಸಿದ್ದರಾಮಯ್ಯನವರೇ, ಘಟನೆ ಸಂಬಂಧ ಬರೀ ವರದಿ ಪಡೆದರೆ ಸಾಲದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರು ಕಳುಹಿಸದಂತೆ ಕ್ರಮ ವಹಿಸಿ, ಸರ್ಕಾರಿ ಆಸ್ಪತ್ರೆಗಳಿಗೆ ಅತ್ಯಾಧುನಿಕ ಸೌಲಭ್ಯ ಒದಗಿಸಿ, ಅಮಾಯಕರ ಪ್ರಾಣ ಉಳಿಸಿ ಜೊತೆಗೆ ತಮಗೂ, ಇಲಾಖೆಗೂ ಸಂಬಂಧವಿಲ್ಲದಂತಿರುವ ಆರೋಗ್ಯ ಸಚಿವರಿಗೆ ಜವಾಬ್ದಾರಿ, ಕರ್ತವ್ಯದ ಪಾಠ ಮಾಡಿ ಎಂದು ಬಿಜೆಪಿ ಆಗ್ರಹಿಸಿದೆ.

ಇನ್ನೂ ಶಿಕ್ಷಣದಲ್ಲಿ ರಾಜಕೀಯ ಬೆರೆಯಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರೂ ಆದ ಗೌರವಾನ್ವಿತ ರಾಜ್ಯಪಾಲರೇ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾಗಿರುವುದು ಶಿಕ್ಷಣದ ಭೂಷಣ. ಆದರೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ ಎಂದು ವಿಜಯೇಂದ್ರ ಕಿಡಿ ಕಾರಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿ ಅವರಿಗೆ ನೀಡಲು ಹೊರಟಿರುವ ಸರ್ಕಾರದ ನಿಲುವು ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲೂ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲಿದೆ. ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿರುವ ಹಾಗೂ ರಾಜ್ಯಪಾಲರನ್ನು ವೈರಿಯಂತೆ ನೋಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿರುವುದು ಸಾಂವಿಧಾನಿಕ ವ್ಯವಸ್ಥೆನ್ನು ವಿಚಲಿತಗೊಳಿಸುವ ಹುನ್ನಾರದಿಂದ ಕೂಡಿದೆ ಎಂದು ವಿಜಯೇಂದ್ರ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT