ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಾಸನ: ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ.

ಬೆಂಗಳೂರು: ಡಿಸೆಂಬರ್5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹೆಸರು ಮರೆಮಾಚಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿದೆ.

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ. ಹೀಗಿದ್ದು ಸಹ ಯಾಕೆ ಪಕ್ಷದ ಚಿಹ್ನೆ ಮೇಲೆ ಸಮಾವೇಶ ಮಾಡುತ್ತಿಲ್ಲ..? ವೈಯಕ್ತಿಕ ಬಲ ಪ್ರದರ್ಶನಕ್ಕೆ ಹೀಗೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.

ಅಧಿಕಾರ ಕೊಟ್ಟ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಸಮಾವೇಶ ಮಾಡುವ ಉದ್ದೇಶ ಏನು…? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಿ. ಪಕ್ಷದ ವೇದಿಕೆ ಬಿಟ್ಟು ಮಾಡುವ ಉದ್ದೇಶ ಒಳ್ಳೆಯದಲ್ಲ. ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೇ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಹಾಗೂ ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರದ ಜೊತೆಗೆ ಸಚಿವರಾದ ಕೆ.ಎನ್‌ ರಾಜಣ್ಣ, ಹೆಚ್‌.ಸಿ ಮಹದೇವಪ್ಪ, ಎಂಎಲ್‌ಸಿ ಯತೀಂದ್ರ ಸ್ಥಳ ಪರಿಶೀಲನೆ ಮಾಡುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!