ಬಳ್ಳಾರಿ ಆಸ್ಪತ್ರೆ 
ರಾಜ್ಯ

'ಕಳಪೆ ಗುಣಮಟ್ಟದ...'; ಬಳ್ಳಾರಿ ಆಸ್ಪತ್ರೆ 5 ಬಾಣಂತಿಯರ ಸಾವಿಗೆ ಕಾರಣ ಬಹಿರಂಗ!

ನವೆಂಬರ್​ 09 ರಂದು‌ ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕೇವಲ 15 ದಿನಗಳಲ್ಲಿ 5 ಬಾಣಂತಿಯರು ಮೃತಪಟ್ಟಿದ್ದರು.

ಬಳ್ಳಾರಿ: ಕೇವಲ 15 ದಿನಗಳ ಅಂತರದಲ್ಲಿ 5 ಮಂದಿ ಬಾಣಂತಿಯರ ಸಾವಿನ ಮೂಲಕ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬಳ್ಳಾರಿ ಸರ್ಕಾರಿ ಆಸ್ಪತ್ರೆ (BIMS) ವಿಚಾರ ಇದೀಗ ಮತ್ತೆ ಸುದ್ದಿಯಾಗುತ್ತಿದೆ.

ಹೌದು.. ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (BIMS) ಕಳೆದ 15 ದಿನಗಳಲ್ಲಿ ಐದು ಬಾಣಂತಿಯರ ಸಾವಿಗೆ ಕಾರಣವೇನು ಎಂಬುದು ಕೊನೆಗೂ ಬಹಿರಂಗವಾಗಿದ್ದು, ಬಾಣಂತಿಯರಿಗೆ ಸಿಸೇರಿಯನ್ ವೇಳೆ ನೀಡಿದ್ದ ಕಳಪೆ ಮಟ್ಟದ “IV ಗ್ಲೂಕೋಸ್”​ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ಸರ್ಕಾರಕ್ಕೆ (Karnataka Government) ಸಲ್ಲಿಸಿದ್ದ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸುದ್ದಿಮಾಧ್ಯಮವೊಂದು ವರದಿ ಮಾಡಿದ್ದು, ಅಂದು ಬಾಣಂತಿಯರಿಗೆ ನೀಡಿದ್ದ ಐವಿ (ಇಂಟ್ರಾವೆನಸ್ ದ್ರಾವಣ) ಕಳಪೆ ಗುಣಮಟ್ಟದಿಂದ ಕೂಡಿತ್ತು. ಆದರೂ, ಕೂಡ ವೈದ್ಯರು ಸಿಸೇರಿಯನ್​ ವೇಳೆ‌ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, ಇಂಟ್ರಾವೆನಸ್ ದ್ರಾವಣ (IV ಗ್ಲುಕೋಸ್) ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಏನಿದು ಪ್ರಕರಣ?

ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಣಿಯರಿಗೆ ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ನವೆಂಬರ್​ 09 ರಂದು‌ ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕೇವಲ 15 ದಿನಗಳಲ್ಲಿ 5 ಬಾಣಂತಿಯರು ಮೃತಪಟ್ಟಿದ್ದರು. ಈ ವಿಚಾರ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ಈ ನಡುವೆ ಬಾಣಂತಿಯರ ಸಾವಿಗೆ ಕಾರಣವೇನು ಎಂಬುವುದನ್ನು ತಿಳಿಯಲು ಸರ್ಕಾರ ತಜ್ಞರ ಸಮಿತಿ ರಚಿಸಿತ್ತು. ಡಾ. ಸವಿತಾ, ಡಾ. ಭಾಸ್ಕರ್ ಮತ್ತು ಡಾ. ಹರ್ಷ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿದ್ದು, ಈ ಕೂಡಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾವಿಗೆ ಏನು ಕಾರಣ ಎಂದು ತನಿಖೆ ನಡೆಸಬೇಕು ಎಂದು ಸೂಚಿಸಿತ್ತು.

ಅಲ್ಲದೆ ತನಿಖೆ ಬಳಿಕ ಸರ್ಕಾರಕ್ಕೆ ತುರ್ತು ವರದಿಯನ್ನ ಸಲ್ಲಿಕೆ ಮಾಡಬೇಕೆಂದು ಸೂಚನೆ ನೀಡಿತ್ತು. ತನಿಖೆ ನಡೆಸಿದ ತಂಡ ಸಾವಿಗೆ ಕಾರಣವೇನು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಐವಿ ಗ್ಲೂಕೋಸ್ ನೀಡಿರುವುದೇ ಗರ್ಭಿಣಿಯರ ಸಾವಿಗೆ ಕಾರಣ ಎಂದು ತನಿಖಾ ತಂಡ ವರದಿ ನೀಡಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!