ನಕ್ಸಲ್ ನಾಯಕ ವಿಕ್ರಮ್ ಗೌಡ  
ರಾಜ್ಯ

ವಿಕ್ರಮ್ ಗೌಡ ಎನ್‌ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ಪರಧಿಯಿಂದಾಚೆ ಪೊಲೀಸ್‌ ಪಡೆಗಳಿಂದ ನಡೆಯುವ ಎನ್‌ಕೌಂಟರ್‌ಗಳ ಕುರಿತು ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಹೊಣೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.

ಬೆಂಗಳೂರು: ಪಶ್ಚಿಮ ಘಟ್ಟಗಳ ಕೆಲವು ಭಾಗಗಳಲ್ಲಿ ಸಕ್ರಿಯವಾಗಿರುವ ಸಿಪಿಐ (ಮಾವೋವಾದಿ)ಪಕ್ಷದ ಎಡಪಂಥೀಯ ಉಗ್ರಗಾಮಿಗಳು (ಎಲ್‌ಡಬ್ಲ್ಯೂಇಗಳು) ಶರಣಾಗಲು ಮತ್ತು ಮುಖ್ಯವಾಹಿನಿಗೆ ಸೇರುವಂತೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಇತ್ತೀಚೆಗೆ ನಡೆದ ನಕ್ಸಲ್ ನಾಯಕ ವಿಕ್ರಮ್ ಗೌಡನ ಎನ್‌ಕೌಂಟರ್ ಹತ್ಯೆಯ ಬಗ್ಗೆ ಸರ್ಕಾರ ತನಿಖೆ ನಡೆಸುವಂತೆಯೂ ಅವರು ಸಲಹೆ ನೀಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರಾದ ಬಂಜಗೆರೆ ಜಯಪ್ರಕಾಶ್, ಪಾರ್ವತೀಶ ಬಿಳಿದಾಳೆ, ಕೆ.ಪಿ. ಶ್ರೀಪಾಲ್, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ಪರಧಿಯಿಂದಾಚೆ ಪೊಲೀಸ್‌ ಪಡೆಗಳಿಂದ ನಡೆಯುವ ಎನ್‌ಕೌಂಟರ್‌ಗಳ ಕುರಿತು ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಹೊಣೆ.ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯು ಈಗಾಗಲೇ ವಿಕ್ರಂಗೌಡ ಅವರ ಎನ್‌ಕೌಂಟರ್‌ ನಡೆದ ಸ್ಥಳ ಸೇರಿದಂತೆ ಹೆಬ್ರಿ ತಾಲ್ಲೂಕಿನ ಹಲವು ಸ್ಥಳಗಳಿಗೆ ಭೇಟಿ ನೀಡಿದೆ. ಅಲ್ಲಿರುವ ಆದಿವಾಸಿಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಕೊರತೆಗಳ ಲಾಭ ಪಡೆದು ಕೆಲ ತೀವ್ರಗಾಮಿ ಸಂಘಟನೆಗಳು ಅಲ್ಲಲ್ಲಿ ಸಂಚರಿಸುತ್ತಿರಬಹುದು. ಸರ್ಕಾರ ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಸರ್ಕಾರದ ನಿರ್ಲಕ್ಷ್ಯ ಅಥವಾ ನಿಧಾನಗತಿಯ ಕ್ರಮಗಳು ಬೇರೆ ಸ್ವರೂಪ ಪಡೆದುಕೊಂಡು ಇಂತಹ ಹೋರಾಟಗಾರರಿಗೆ ಜನ್ಮಕೊಡುತ್ತವೆ. ಅರಣ್ಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಬಗ್ಗೆ ಆದಿವಾಸಿಗಳು ಆಪಾದಿಸಿದ್ದಾರೆ ಎಂದರು.

ರಾಜ್ಯದ ಜಾನ್‌ (ಜಯಣ್ಣ), ಮುಂಡಗಾರು ಲತಾ, ಸುಂದರಿ ಹಾಗೂ ವನಜಾಕ್ಷಿ ಸೇರಿದಂತೆ ನಾಲ್ಕೈದು ಮಂದಿ ಮಾತ್ರ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದಾರೆ. ಇವರು ಮುಖ್ಯವಾಹಿನಿಗೆ ಬರುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರ ಹೋರಾಟ ಮುಂದುವರಿಸಬೇಕು. ಸರ್ಕಾರ ಘೋಷಿಸಿರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಇವರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ತ್ವರಿತಗತಿ ನ್ಯಾಯಾಲಯಗಳನ್ನು ರಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ನಿಷೇಧಿತ ಸಿಪಿಐಎಂಎಲ್‌–ಮಾವೋವಾದಿ ಪಕ್ಷದ ಕಾರ್ಯಕರ್ತರ ಮನವೊಲಿಸಿ ಮುಖ್ಯವಾಹಿನಿಗೆ ಕರೆ ತರುವ ಪ್ರಯತ್ನವನ್ನು ಸಮಿತಿ ಮಾಡುತ್ತಿದೆ. ಜೀವಹಾನಿಯಾಗದಂತೆ ಈ ಸಮಸ್ಯೆಯನ್ನು ಬಗೆಹರಿಸಲು ನಾವು ಬದ್ಧವಾಗಿದ್ದೇವೆ. ಇಲ್ಲಿರುವ ಆದಿವಾಸಿಗಳು, ಕೃಷಿಕರ ಸಮಸ್ಯೆಗಳು ಮತ್ತು ಆತಂಕಗಳನ್ನು ನಿವಾರಿಸುವ ಮೂಲಕ ಮಾವೋವಾದಿ ನಕ್ಸಲರಿಗೆ ಹೋರಾಡಲು ವಿಷಯಗಳಿರದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ನಕ್ಸಲರ ಕುಟುಂಬಗಳನ್ನು ನಾವು ಭೇಟಿ ಮಾಡಿದ್ದೇವೆ, ಅವರು ಸಂಕಷ್ಟ ಎದುರಿಸುತ್ತಿದ್ದಾರೆ ಮತ್ತು ಸರ್ಕಾರದ ಪುನರ್ವಸತಿ ಪ್ಯಾಕೇಜ್‌ಗಳನ್ನು ವಿವರಿಸುವ ಮೂಲಕ ಶರಣಾಗುವಂತೆ ಕುಟುಂಬದ ಸದಸ್ಯರ ಮನವೊಲಿಸಲು ಸಲಹೆ ನೀಡಿದ್ದಾಗಿ ಪಾರ್ವತೀಶ್ ಹೇಳಿದ್ದಾರೆ. ಶರಣಾದವರಿಗೆ ಮೂರು ಹಂತಗಳಲ್ಲಿ 2 ಲಕ್ಷ, 4 ಲಕ್ಷ ಮತ್ತು 7.5 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT