ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ನೀರಾವರಿ ಯೋಜನೆಗಳಿಗೆ ತುರ್ತು ಅನುಮತಿ ಕೊಡಿ: ಪ್ರಧಾನಿ ಮೋದಿ ಭೇಟಿ ಮಾಡಿ ರಾಜ್ಯದ ಪರ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸಿಎಂ ಜತೆ ಸಭೆಯಲ್ಲಿ ಹಾಜರಿದ್ದರು.

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಅಲ್ಪಾವಧಿಯ ಕೃಷಿ ಸಾಲದ ಮಿತಿಯನ್ನು ಸರಿಪಡಿಸಲು 10,000 ಕೋಟಿ ರೂಪಾಯಿ ಆರ್ಥಿಕ ನೆರವು ಮತ್ತು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದರು.

ಇಂದು ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್ ನಲ್ಲಿ ನಡೆದ ಸಭೆಯಲ್ಲಿ, ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ ವಹಿಸುವಂತೆ ಸಿದ್ದರಾಮಯ್ಯ ಒತ್ತಾಯಿಸಿದರು. ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸಿಎಂ ಜತೆ ಸಭೆಯಲ್ಲಿ ಹಾಜರಿದ್ದರು.

ನಬಾರ್ಡ್(NABARD) ಕರ್ನಾಟಕಕ್ಕೆ ಅಲ್ಪಾವಧಿಯ ಕೃಷಿ ಸಾಲದ ಮಿತಿಯನ್ನು 2023-24 ರಲ್ಲಿ 5,600 ಕೋಟಿಗಳಿಂದ 2024-25 ರಲ್ಲಿ 2,340 ಕೋಟಿ ರೂಪಾಯಿಗೆ ಇಳಿಸಿದೆ. ಇದು ರೈತರು ತೆಗೆದುಕೊಳ್ಳುವ ಕಡಿಮೆ ಬಡ್ಡಿ ಸಾಲದ ಮಿತಿಯನ್ನು ಶೇಕಡಾ 58 ರಷ್ಟು ಕಡಿತಗೊಳಿಸಿದೆ ಎಂದು ಮುಖ್ಯಮಂತ್ರಿ ಸಭೆಯಲ್ಲಿ ಒತ್ತಿ ಹೇಳಿದರು.

ಈ ಪರಿಸ್ಥಿತಿಯನ್ನು ಸರಿಪಡಿಸಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ವಿನಂತಿ ಮಾಡಿಕೊಳ್ಳುತ್ತಿದ್ದು, ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಅವರು ಪ್ರಧಾನಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮಧ್ಯ ಕರ್ನಾಟಕದ ಬರಪೀಡಿತ ಕೃಷಿಭೂಮಿಗಳಿಗೆ ನೀರುಣಿಸುವ ಭರವಸೆ ನೀಡುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. 2023-24ರ ಕೇಂದ್ರ ಬಜೆಟ್‌ನಿಂದ ಈ ಯೋಜನೆಯು ಬಾಕಿ ಉಳಿದಿದೆ.

ಕಾವೇರಿ ನದಿಯ ಮೇಕೆದಾಟು ಸಮತೋಲನ ಜಲಾಶಯ ಮತ್ತು ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆ -- ಇವೆರಡೂ ಜಲ ಶಕ್ತಿ ಮತ್ತು ಪರಿಸರ ಸಚಿವಾಲಯಗಳ ಅನುಮೋದನೆಗೆ ಕಾಯುತ್ತಿದ್ದು, ಎರಡು ನಿರ್ಣಾಯಕ ನೀರಿನ ಯೋಜನೆಗಳ ಅನುಮತಿಗಾಗಿ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸಿದರು.

ಬೆಂಗಳೂರು ನಗರ ಟೆಕ್ ಹಬ್ ಮತ್ತು ಉನ್ನತ ಜಿಡಿಪಿಯನ್ನು ದೇಶಕ್ಕೆ ಒದಗಿಸುತ್ತದೆ ಹೀಗಾಗಿ ನಗರ ಮತ್ತು ಸಾರ್ವಜನಿಕ ಸಾರಿಗೆಗೆ ವಿಶೇಷ ಸಹಾಯವನ್ನು ಕೋರಿದರು. ಹೆಚ್ಚುವರಿಯಾಗಿ, 13 ಉದಯೋನ್ಮುಖ ನಗರ ನಿಗಮಗಳಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕವು 10,000 ಕೋಟಿ ರೂಪಾಯಿಗಳ ಬೇಡಿಕೆಯನ್ನಿಟ್ಟರು.

ಹಣಕಾಸಿನ ಹಂಚಿಕೆಯಲ್ಲಿ, 15 ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದು ತನ್ನ ತೆರಿಗೆ ಪಾಲನ್ನು ಶೇಕಡಾ 1 ರಷ್ಟು ಕಡಿಮೆ ಮಾಡಿದೆ ಎಂದರು.

ಪರಿಹಾರ ಅನುದಾನವನ್ನು ಒದಗಿಸಬೇಕು ಮತ್ತು ಭವಿಷ್ಯದ ಹಣಕಾಸು ಆಯೋಗಗಳು ಗಮನಾರ್ಹ ತೆರಿಗೆ ಕೊಡುಗೆಗಳನ್ನು ಹೊಂದಿರುವ ರಾಜ್ಯಗಳಿಗೆ ದಂಡ ವಿಧಿಸದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT