ಸಾಂದರ್ಭಿಕ ಚಿತ್ರ 
ರಾಜ್ಯ

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿಗೆ ಮಧ್ಯಂತರ ಜಾಮೀನು ನಿರಾಕರಣೆ

ಪೊಲೀಸರು ತಮ್ಮನ್ನು ಬಂಧಿಸುವ ಆತಂಕದಿಂದ ಕನಕ ಲಕ್ಷ್ಮಿ ನ್ಯಾಯಾಲಯದ ಮೆಟ್ಟಿಲೇರಿದ್ದು, ತನ್ನ ಮುಖ್ಯ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದಾರೆ.

ಬೆಂಗಳೂರು: ಮಹಿಳಾ ಉದ್ಯಮಿಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಬಿ.ಎಂ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಗರದ ವಿಶೇಷ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಕನಕ ​​ಲಕ್ಷ್ಮಿ ಅವರು ಜಾಮೀನು ಅರ್ಜಿಯಲ್ಲಿ ತಮ್ಮ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದಿದ್ದಾರೆ, ತಾನು ನಿರಪರಾಧಿಯಾಗಿದ್ದು, ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದಿದ್ದಾರೆ. ಪೊಲೀಸರು ತಮ್ಮನ್ನು ಬಂಧಿಸುವ ಆತಂಕದಿಂದ ಕನಕ ಲಕ್ಷ್ಮಿ ನ್ಯಾಯಾಲಯದ ಮೆಟ್ಟಿಲೇರಿದ್ದು, ತನ್ನ ಮುಖ್ಯ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದಾರೆ. 23 ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಕೆ ಎಂ ರಾಧಾಕೃಷ್ಣ ಕನಕ ಲಕ್ಷ್ಮಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ತನಿಖೆ ಆರಂಭದ ಹಂತದಲ್ಲಿದೆ. ಅಪರಾಧಗಳ ಸ್ವರೂಪ ಮತ್ತು ಗಂಭೀರತೆ, ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣನೆಗೆ ತೆಗೆದುಕೊಂಡ ನಂತರ, ಮಧ್ಯಂತರ ಜಾಮೀನಿನ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನವೆಂಬರ್ 22, 2024 ರಂದು, ಬನಶಂಕರಿ ಪೊಲೀಸರು ಕನಕ ಲಕ್ಷ್ಮಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 (ಎ) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 ರ ಅಡಿಯಲ್ಲಿ ಜೀವಾ ಅವರ ಸಹೋದರಿ ಸಂಗೀತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕನಕ ಲಕ್ಷ್ಮಿ ಅವರು ನವೆಂಬರ್ 14 ಮತ್ತು 21, 2024 ರ ನಡುವೆ ಜೀವಾ ಅವರನ್ನು ವಿಚಾರಣೆಗೆ ಕರೆದರು, ಈ ಸಂದರ್ಭದಲ್ಲಿ ಅವರು ಉದ್ಯಮಿಗೆ ತೀವ್ರ ಕಿರುಕುಳ ನೀಡಿ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಹೀಗಾಗಿ ನವೆಂಬರ್ 22 ರ ಬೆಳಿಗ್ಗೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಜೀವಾ 13 ಪುಟಗಳ ಡೆತ್ ನೋಟ್ ಬರೆದಿಟ್ಟುಹೋಗಿದ್ದಾರೆ.ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆಗಳನ್ನು ಸಲ್ಲಿಸಲು ನ್ಯಾಯಾಲಯವು ಮುಖ್ಯ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 5 ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT