ಗೃಹ ಸಚಿವ ಡಾ.ಜಿ. ಪರಮೇಶ್ವರ್ 
ರಾಜ್ಯ

ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ-ಗೃಹ ಸಚಿವ ಪರಮೇಶ್ವರ್

ಆಯಾ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಸಂಬಂಧಿತ ಚಟುವಟಿಕೆಗಳು ಮುಂದುವರಿದರೆ ಇನ್ಸ್‌ಪೆಕ್ಟರ್‌ಗಳು, ಉಪ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು

ಮಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಆಯಾ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಸಂಬಂಧಿತ ಚಟುವಟಿಕೆಗಳು ಮುಂದುವರಿದರೆ ಇನ್ಸ್‌ಪೆಕ್ಟರ್‌ಗಳು, ಉಪ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ನೂತನ ಪೊಲೀಸ್ ಕ್ವಾರ್ಟರ್ಸ್ ಹಾಗೂ ಪೊಲೀಸ್ ಠಾಣೆ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಾದಕ ವಸ್ತು ಮಾರಾಟದ ವಿರುದ್ಧದ ಸಮರಕ್ಕೆ ಕರ್ನಾಟಕದ ಬದ್ಧತೆಯನ್ನು ಪುನರುಚ್ಚರಿಸಿದರು. ಕಳೆದ ವರ್ಷದಲ್ಲಿ ಬೆಂಗಳೂರಿನಲ್ಲಿ 250 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ನಾಶಪಡಿಸಲಾಗಿದೆ ಎಂದು ತಿಳಿಸಿದರು.

ದಂಧೆಯಲ್ಲಿ ತೊಡಗಿರುವ ಹಲವಾರು ವಿದೇಶಿ ಪ್ರಜೆಗಳನ್ನು ಬಂಧಿಸಿ, ಗಡಿಪಾರು ಮಾಡಲಾಗಿದೆ ಮತ್ತು ಅನೇಕ ಪೆಡ್ಲರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ ಪೊಲೀಸರು ಗುಂಡು ಹಾರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಅಗತ್ಯವಿದ್ದರೆ ಪೊಲೀಸರು ಗುಂಡು ಹಾರಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ನಕ್ಸಲ್ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಮಾವೋವಾದಿಗಳು ಶರಣಾಗುವಂತೆ ಉತ್ತೇಜಿಸಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಇತ್ತೀಚಿಗೆ ಎನ್ ಕೌಂಟರ್ ನಲ್ಲಿ ಹತ್ಯೆಯಾದ ನಕ್ಸಲ್ ನಾಯಕ ವಿಕ್ರಮ್ ಗೌಡ ಸಹಚರರು ಸರ್ಕಾರದ ಪುನರ್ವಸತಿ ನೀತಿಯಡಿಯಲ್ಲಿ ಶರಣಾಗುವಂತೆ ಒತ್ತಾಯಿಸಿದರು.

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಎಲ್ಲಾರಿಗೂ ಒಂದೇ ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT