ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ 
ರಾಜ್ಯ

ಮುಡಾ ನಿವೇಶನ ವಾಪಸ್: ಪತ್ನಿ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯರ ಪತ್ನಿ ಬಿ.ಎಂ. ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ, ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!