ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜ್ಯ

ಸರ್ಕಾರ ಬೀಳಿಸಲು 1000 ಕೋಟಿ ರೂ ಸಂಗ್ರಹ ಹೇಳಿಕೆ: ಯತ್ನಾಳ್​ ವಿರುದ್ಧ ಕಾಂಗ್ರೆಸ್​ ದೂರು

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಸೋಮವಾರ ದೂರು ದಾಖಲಿಸಿದೆ.

1,000 ಕೋಟಿ ರೂ. ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಿಎಂಎಲ್‌ಎ (PMLA) ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೆ.29ರಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು.

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಆ ಹಣವನ್ನು ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ್ದಾರೆ. ಅಲ್ಲದೇ ಡಿಸೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂದೂ ಹೇಳಿಕೆ ಕೊಟ್ಟಿದ್ದಾರೆ. ಹಣ ಸಂಗ್ರಹಿಸಿರುವ ನಾಯಕರ ಮನೆಯಲ್ಲಿ ನೋಟು ಎಣಿಕೆ ಯಂತ್ರವೂ ಪತ್ತೆಯಾಗಿತ್ತು ಹೇಳಿದ್ದರು.

ದೂರು ಸ್ವೀಕರಿಸಲಾಗಿದ್ದು, ಪರಿಶೀಲನೆಯ ನಂತರ ಎಫ್‌ಐಆರ್ ದಾಖಲಿಸಲಾಗುಪವುದು ಎಂದು ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!