KPSC: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನೇಮಕಾತಿ, ಡಿ.29ಕ್ಕೆ ಪೂರ್ವಭಾವಿ ಮರು ಪರೀಕ್ಷೆ
ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೆ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ
ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸೇವಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಡಿಸೆಂಬರ್ 29 ರಂದು ಇತರ ಯಾವುದೇ ಪರೀಕ್ಷೆ ನಿಗದಿಯಾಗಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡೇ ಮರುಪರೀಕ್ಷೆಗೆ ಆ ದಿನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೆ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು KPSC ಕಾರ್ಯದರ್ಶಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಫೋಸ್ಟ್ ಮಾಡಲಾಗಿದೆ.
384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಆಗಸ್ಟ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.