ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.ಅಕ್ಟೋಬ‌ರ್ 21ರಿಂದ 2ನೇ ಅವಧಿ ಪ್ರಾರಂಭ ಆಗಲಿದೆ. 2025ರ ಏಪ್ರಿಲ್ 10 ತನಕ ಶಾಲೆಗಳು ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!