ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಹಳೆಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಅಕ್ಟೋಬರ್ 1ರಂದು ಮಂಗಳವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6 ಕ್ಕೆ ಮುಂದೂಡಿದರು. (ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ಅವರಿಗೇ ಇದೀಗ ಸಮಸ್ಯೆ ಎದುರಾಗಿದೆ.