ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ online desk
ರಾಜ್ಯ

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ, ರಾಜಕೀಯ ಲೇಪ ನೀಡಲಾಗಿದೆ: BJP ಶಾಸಕ ಯತ್ನಾಳ್

ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅದಕ್ಕೆ ರಾಜಕೀಯ ಲೇಪ ಬಳೆದು ಮಾಧ್ಯಮಗಳು ಬೇರೆ ಏನೋ ಅರ್ಥ ಬರುವಂತೆ ವರದಿ ಮಾಡಿದ್ದಾರೆ. ಇವೆಲ್ಲ ಶುದ್ಧ ಸುಳ್ಳಾಗಿದ್ದು, ಈ ರೀತಿಯಾದ ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ.

ಬೆಳಗಾವಿ: ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅದಕ್ಕೆ ರಾಜಕೀಯ ಲೇಪ ಬಳೆದು ಮಾಧ್ಯಮಗಳು ಬೇರೆ ಏನೋ ಅರ್ಥ ಬರುವಂತೆ ವರದಿ ಮಾಡಿದ್ದಾರೆ. ಇವೆಲ್ಲ ಶುದ್ಧ ಸುಳ್ಳಾಗಿದ್ದು, ಈ ರೀತಿಯಾದ ವದಂತಿಗಳಿಗೆ ಕಿವಿಗೊಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಾವಣಗೆರೆಯಲ್ಲಿ ಮಾಧ್ಯಮಗಳನ್ನುದ್ದೇಸಿ ಮಾತನಾಡುವಾಗ ಕಾಂಗ್ರೆಸ್ ನಲ್ಲಿರುವ ಒಳಕಿತ್ತಾಟದಿಂದ ಸಿದ್ದರಾಮಯ್ಯ ನವರನ್ನು ಮುಖ್ಯ ಮಂತ್ರಿ ಸ್ಥಾನದಿಂದ ಇಳಿಸಿ, ಬೇರೆ ಆಕಾಂಕ್ಷಿಗಳು ಮುಖ್ಯ ಮಂತ್ರಿಗಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದೆ. ಆದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅದಕ್ಕೆ ರಾಜಕೀಯ ಲೇಪ ಬಳೆದು ಮಾಧ್ಯಮಗಳು ಬೇರೆ ಏನೋ ಅರ್ಥ ಬರುವಂತೆ ವರದಿ ಮಾಡಿದ್ದಾರೆ. ಇವೆಲ್ಲ ಶುದ್ಧ ಸುಳ್ಳಾಗಿದ್ದು, ಈ ರೀತಿಯಾದ ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆಂದು ಹೇಳಿದ್ದಾರೆ.

ಕದ್ದು-ಮುಚ್ಚಿ ಸಭೆ ನಡೆಸುತ್ತಿರುವ ಕಾಂಗ್ರೆಸ್ ನ ಪ್ರಭಾವಿ ಸಚಿವರು ತಮ್ಮ ಸಭೆಯಲ್ಲಿ ಏನು ಚರ್ಚೆಯಾಯಿತು ಎಂಬುದನ್ನು ಮೊದಲು ಜನತೆಗೆ ತಿಳಿಸಲಿ. ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳು ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಪಡೆದು ಅಪಾರ್ಟ್ಮೆಂಟ್ ಒಂದರಲ್ಲಿ ನೆಲೆಸಿದ್ದರೂ ಪತ್ತೆಹಚ್ಚಳ್ಳು ವಿಫಲರಾದ ಪೊಲೀಸ್ ಇಲಾಖೆ ಜಾಲತಾಣಗಳಲ್ಲಿ ಯಾರು ಸರ್ಕಾರದ ವಿರುದ್ಧ ಬರೆದರು ಎಂಬುದನ್ನು ಗಮನಿಸುವಲ್ಲಿ ನಿರತರಾಗಿದ್ದಾರೆ. ನನ್ನನ್ನು ದೂಷಿಸಿ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡುವುದು ಇವರ ತಂತ್ರಗಾರಿಕೆ ಆಗಿದೆ. ಇವೆಲ್ಲ ಷಡ್ಯಂತ್ರಗಳನ್ನು, ಊಹಾ ಪೋಹಗಳನ್ನು, ತಪ್ಪು ವರದಿಗಳನ್ನು ನಂಬಬಾರದು ಮತೊಮ್ಮೆ ನಿಮಗೆ ಮನವರಿಕೆ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಇತ್ತೀಚೆಗೆ ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದ ಯತ್ನಾಳ್ ಅವರು “ಕಾಂಗ್ರೆಸ್‌ ಸರಕಾರವನ್ನು ಕೆಡವಲು ಬಿಜೆಪಿ 1200 ಕೋಟಿ ರೂಪಾಯಿಗಳನ್ನು ಎತ್ತಿಟ್ಟಿದೆ ಎಂದು ಹೇಳಿದ್ದರು. ಬಿಜೆಪಿ ನಾಯಕರು ಈ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದರು.

ಕಾಂಗ್ರೆಸ್‌ ಈ ಹೇಳಿಕೆಯನ್ನು ಮುಂದಿಟ್ಟುಕೊಂಡು ಜಾರಿ ನಿರ್ದೇಶನಾಲಯಕ್ಕೆ ದೂರು ಕೊಡಲು ಮುಂದಾಗಿತ್ತು. ಅಲ್ಲದೆ, ಯತ್ನಾಳ್‌ ಹೇಳಿಕೆಯಿಂದ ಬಿಜೆಪಿಯಲ್ಲೂ ಮುಜುಗರದ ಪರಿಸ್ಥಿತಿ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT