ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಡಿ ಗ್ಯಾಂಗ್ ನ ಮೂವರು ರಿಲೀಸ್!

ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.

ಮೃತ ರೇಣುಕಾಸ್ವಾಮಿ
Shilpa D
Updated On : 2 Oct 2024, 11:55 am

ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.

ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರಿಗೆ ಸೂಚಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.

ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಜಾಮೀನು ಆದೇಶ ಪ್ರತಿ ಮೇಲ್ ಮೂಲಕ ತಲುಪಿದ್ದು, ಇಂದು ಬಿಡುಗಡೆ ಪ್ರಕ್ರಿಯೆ ಮುಗಿಸಿ ಮೂವರು ಆರೋಪಿಗಳನ್ನ ಜೈಲಿನಿಂದ ರಿಲೀಸ್ ಮಾಡಲಾಗಿದೆ.

Advertisement

Advertisement

Also Read

ರೇಣುಕಾಸ್ವಾಮಿ ಹತ್ಯೆ ಕೇಸು: ಮೂವರಿಗೆ ಜಾಮೀನು ಮಂಜೂರು; ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement