ಬೈರತಿ ಸುರೇಶ್ 
ರಾಜ್ಯ

ಮುಡಾ ನಿವೇಶನ ವಾಪಸ್: ಸಿಎಂ ಪತ್ನಿ ಪಾರ್ವತಿ ಅವರ ವೈಯಕ್ತಿಕ ನಿರ್ಧಾರ- ಬೈರತಿ ಸುರೇಶ್

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ , ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.

ಕೋಲಾರ: ವಿವಾದಕ್ಕೆ ಕಾರಣವಾಗಿರುವ 14 ನಿವೇಶನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರ ಹೆಸರಿನಲ್ಲಿಯೇ ಇದ್ದ ಕಾರಣ ಮುಡಾ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಅವರೇ ತೆಗೆದುಕೊಂಡಿದ್ದಾರೆ ಎಂದು ಸಿಎಂ ಆಪ್ತ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. .

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ, ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು. ಮುಖ್ಯಮಂತ್ರಿಯವರ ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಮುಡಾ ನಿವೇಶನ ಹಂಚಿಕೆ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಹಿಟ್ ಅಂಡ್ ರನ್ ರಾಜಕಾರಣಿ ಎಂದು ಹೇಳಿಕೆ ನೀಡಿದ್ದ ಕೇಂದ್ರ ಉಕ್ಕು ಸಚಿವ ಕುಮಾರಸ್ವಾಮಿ, ಮುಡಾ ನಿವೇಶನ ವಾಪಸ್ ನೀಡಿದ ನಂತರ ಸಿಎಂ ಅವರನ್ನು ಯೂ ಟರ್ನ್ ರಾಜಕಾರಣಿ ಎಂದಿದ್ದಾರೆ. ಈ ಎರಡು ಹೇಳಿಕೆಗಳಿಗೂ ಸಂಬಂಧವಿಲ್ಲ , ಕುಮಾರಸ್ವಾಮಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಮತ್ತು ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಸುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಈ ಸಂಬಂಧ ತನಿಖೆಯಾಗಬೇಕು ಎಂದು ಹೇಳಿದರು. ಕಳೆದ ವಾರ ನಡೆದ ಸಭೆಯಲ್ಲಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎರಡು ವಿಭಾಗಗಳ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಬಗ್ಗೆ ತಮಗೆ ಸರಿಯಾದ ಮಾಹಿತಿಯಿಲ್ಲ ಆ ಸಮಯದಲ್ಲಿ ನಾನು ಈರಿನಲ್ಲಿರಲಿಲ್ಲ, ಈ ಸಂಬಂಧ ಮಾಹಿತಿ ಪಡೆದಿದ್ದೇನೆ ಎಂದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಸಮಸ್ಯೆಗಳ ಪರಿಹಾರಕ್ಕೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT