ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

50 ಕೋಟಿ ರೂ ಗೆ ಬೇಡಿಕೆ ಆರೋಪ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲು

ಎಚ್.ಡಿ. ಕುಮಾರಸ್ವಾಮಿ ಕೂಡಾ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೂ. 50 ಕೋಟಿ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಅವರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಉದ್ಯಮಿ ವಿಜಯ್ ತಾತ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡಾ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿರುವುದಾಗಿ ವರದಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ